ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನ: ನೂತನ ಕಚೇರಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 6:26 IST
Last Updated 14 ಜುಲೈ 2024, 6:26 IST
   

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಪ್ರಾರಂಭಿಸಿದೆ.

ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನೂತನ ಕಚೇರಿ ಉದ್ಘಾಟಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದರು.

ಕಚೇರಿಯಲ್ಲಿ ಕವಿವಾಣಿಗಳ ಕಾವ್ಯದ ಸಿಂಚನಗಳ ಫಲಕಗಳನ್ನು ಅಳವಡಿಸಿ ಕನ್ನಡದ ಕಂಪು ಸೂಸುವಂತೆ ಮಾಡಲಾಗಿದೆ.

ADVERTISEMENT

ಕಚೇರಿ ಉದ್ಘಾಟನೆಯ ನಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥ ಶ್ರೀಗಂಧದ ಗಿಡವನ್ನು ನೆಟ್ಟು ನೀರೆರೆದರು.

ಕಾರ್ಯಕ್ರಮದಲ್ಲಿ‌ ಮಂಡ್ಯ ಜಿಲ್ಲೆಯ ಶಾಸಕ ಪಿ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಷಿ, ಜಿಲ್ಲಾಧಿಕಾರಿ ಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್. ನಾಗರಾಜು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.