ADVERTISEMENT

ಮದ್ದೂರು | 86 ಜೀತ ವಿಮುಕ್ತರು ಮುಖ್ಯವಾಹಿನಿಗೆ: ಎನ್.ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 2:44 IST
Last Updated 22 ಜುಲೈ 2025, 2:44 IST
ಮದ್ದೂರಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜೀತ ವಿಮುಕ್ತ ಕುಟುಂಬದವರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಉದ್ಘಾಟಿಸಿದರು
ಮದ್ದೂರಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜೀತ ವಿಮುಕ್ತ ಕುಟುಂಬದವರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಉದ್ಘಾಟಿಸಿದರು   

ಮದ್ದೂರು: ಜಿಲ್ಲೆಯಲ್ಲಿ ಈಗಾಗಲೇ ಗುರುತಿರುವ 86 ಜನ ಜೀತವಿಮುಕ್ತರಿಗೆ ಜಿಲ್ಲಾ ಪಂಚಾಯಿತಿಯಿಂದ ಸರ್ಕಾರದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು ಒದಗಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಪಟ್ಟಣದ ತಾಲ್ಲಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜೀತವಿಮುಕ್ತ ಕುಟುಂಬದವರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು‌.

‘ಜೀತ ಪದ್ಧತಿಯು ಕಾನೂನುಬಾಹಿರ ಎಂದು ತಿಳಿದಿದ್ದರೂ ಮುಗ್ದ ಜನರು ಅದಕ್ಕೆ ಬಲಿಯಾಗುತ್ತಿದ್ದಾರೆ. ಬಡತನದಿಂದ ಕೆಲವರು ಜೀತದಾಳಾಗಿ ದುಡಿಯುತ್ತಿದ್ದು, ಜೀತ ಪದ್ಧತಿಯನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸರ್ಕಾರ ಹಲವು ಯೋಜನೆಗಳನ್ನು ‌ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಬದುಕನ್ನು ಕಾಣಬೇಕು’ ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಜೀತವಿಮುಕ್ತರಾದ 86 ಮಂದಿಯಲ್ಲಿ 4 ಹೆಣ್ಣು ಹಾಗೂ 82 ಪುರುಷರು ಸೇರಿದ್ದು, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅವರ ಬಳಿ ಸರ್ಕಾರಿ ದಾಖಲೆಗಳಿಲ್ಲದಿರುವುದು ತಿಳಿದುಬಂತು. ಆದ್ದರಿಂದ ಅವರಿಗೆ ಅವಶ್ಯಕವಾಗಿ ಬೇಕಾಗಿರುವ ಜಿಲ್ಲೆಯ ಎಲ್ಲಾ ಜೀತವಿಮುಕ್ತರಿಗೂ ಸರ್ಕಾರದ '13' ದಾಖಲೆಗಳನ್ನು ನೀಡಲಾಗುತ್ತಿದೆ. ಇದರೊಂದಿಗೆ ಅವರ ಆರೋಗ್ಯ ತಪಾಸಣೆಯನ್ನೂ ನಡೆಸಲಾಗುತ್ತಿದೆ ಎಂದರು.

‘ಆಧಾರ್ ಕಾಡ್೯ ಸೇರಿದಂತೆ ವಿವಿಧ ಗುರುತಿನ ಚೀಟಿ ನೀಡಲಾಗುತ್ತಿದ್ದು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆದು ಇನ್ನೂ ಮುಂದೆ ಸ್ವಾವಲಂಬಿಗಳಾಗಿ ಜೀವನ ನಡೆಸಬಹುದು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಲ್ಲೂಕು ಪಂಚಾಯಿತಿ ಇಒ ರಾಮಲಿಂಗಯ್ಯ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಮದ್ದೂರಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜೀತ ವಿಮುಕ್ತ ಕುಟುಂಬದವರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಉದ್ಘಾಟಿಸಿದರು

‘ಜೀತವಿಮುಕ್ತರಿಗೆ 13 ಗುರುತಿನ ಚೀಟಿ’:

ಶಾಸಕ ಕೆ.ಎಂ.ಉದಯ್ ಅವರು ಮಾತನಾಡಿ ‘ಜೀತವಿಮುಕ್ತರಿಗೆ ಆಧಾರ್ ಕಾರ್ಡ್ ಜನನ-ಮರಣ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ-ಆದಾಯ ಪ್ರಮಾಣ ಪತ್ರ ಪಡಿತರ ಗುರುತಿನ ಚೀಟಿ ಚುನಾವಣಾ ಗುರುತಿನ ಚೀಟಿ ವೈಯಕ್ತಿಕ ಬ್ಯಾಂಕ್ ಉಳಿತಾಯ ಖಾತೆ ವಿವಿಧ ಯೋಜನೆಗಳಡಿ ಪಿಂಚಣಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಆರೋಗ್ಯ ವಿಮೆಗಳು (ಪಿಎಂಜೆಜೆಬಿವೈ ಪಿಎಂಎಸ್‌ಬಿವೈ) ಇ ಶ್ರಮ್ ಗುರುತಿನ ಕಾರ್ಡ್ ಯುಡಿಐಡಿ ಗುರುತಿನ ಚೀಟಿ ಭಾಗ್ಯಲಕ್ಷ್ಮಿ ಯೋಜನೆ ಮನರೇಗಾ ಉದ್ಯೋಗ ಚೀಟಿ ನೀಡಲಾಗುತ್ತಿದೆ. ಇದರಿಂದ ಅವರು ಸ್ವಾವಲಂಬಿ ಜೀವನ ನಡೆಸಬಹುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.