ADVERTISEMENT

ಮಂಡ್ಯ | ತುಂಡಾಗಿ ಬಿದ್ದ ವಿದ್ಯುತ್‌ ತಂತಿ: ತಪ್ಪಿದ ಅನಾಹುತ

ತುಂಡಾಗಿ ಬಿದ್ದ ವಿದ್ಯುತ್‌ ತಂತಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2025, 12:40 IST
Last Updated 18 ಫೆಬ್ರುವರಿ 2025, 12:40 IST
ಮಂಡ್ಯದ ಅಂಬೇಡ್ಕರ್‌ ವೃತ್ತದ ಬಳಿ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು
ಮಂಡ್ಯದ ಅಂಬೇಡ್ಕರ್‌ ವೃತ್ತದ ಬಳಿ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು   

ಮಂಡ್ಯ: ನಗರದ ಅಂಬೇಡ್ಕರ್‌ ವೃತ್ತದ ಬಳಿ ಹೈಟೆನ್ಷನ್ ವಿದ್ಯುತ್ ತಂತಿ ಮಂಗಳವಾರ ತುಂಡಾಗಿ ಬಿದ್ದಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ತಂತಿ ಬಿದ್ದ ವೇಳೆ ವಾಹನ ಹಾಗೂ ಸಾರ್ವಜನಿಕರ ಸಂಚಾರವಿಲ್ಲದ ಕಾರಣ ಅನಾಹುತ ತಪ್ಪಿದೆ. ಮಂಡ್ಯ, ಬನ್ನೂರು ಮಾರ್ಗದ ನೂರಡಿ ರಸ್ತೆಯಲ್ಲಿ ವಾಹನ ದಟ್ಟಣೆ ಹಾಗೂ ಜನ ಸಂದಣಿ ಹೆಚ್ಚಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ 7.40 ಸಮಯದಲ್ಲಿ 11 ಕೆವಿ ಸಾಮರ್ಥ್ಯದ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ.

ಸಾರ್ವಜನಿಕರು ಎಚ್ಚೆತ್ತು ವಾಹನಗಳನ್ನು ಅಡ್ಡಗಟ್ಟಿದ್ದು, ಜನರು ಅತ್ತ ಸುಳಿಯದಂತೆ ನೋಡಿಕೊಂಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸೆಸ್ಕ್‌ ಸಿಬ್ಬಂದಿ ಸುತ್ತಮುತ್ತಲ ಪ್ರದೇಶದ ವಿದ್ಯುತ್ ಕಡಿತ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.