ಬೆಳಕವಾಡಿ: ಸಮೀಪದ ಶಿವನಸಮುದ್ರ (ಬ್ಲಫ್) ಗ್ರಾಮದ ಕೆಇಬಿ ಕಾಲೋನಿ ಅಂಚೆ ಕಚೇರಿ ಹಿಂಭಾಗದಲ್ಲಿ ಇರಿಸಿದ್ದ ಅರಣ್ಯ ಇಲಾಖೆಯ ಬೋನಿನಲ್ಲಿ ಬುಧವಾರ ರಾತ್ರಿ ಚಿರತೆ ಸೆರೆಯಾಗಿದೆ.
ಶಿವನಸಮುದ್ರ ಸೇರಿ ಸುತ್ತಮುತ್ತಲಿನ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಹಾಗೂ ಹಲವಾರು ದಿನಗಳಿಂದ ಸಾಕು ನಾಯಿ, ಹಸು, ಕರುಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನ ಗುರುತಿಸಿ ಅಂಚೆ ಕಚೇರಿ ಹಿಂಭಾಗದಲ್ಲಿ ಕೆಲ ದಿನಗಳ ಹಿಂದೆ ಬೋನು ಇರಿಸಿದ್ದರು.
ಮಳವಳ್ಳಿ ವಲಯ ಅರಣ್ಯಾಧಿಕಾರಿ ಎನ್.ಸಿ.ಮಹದೇವ್ ಮಾತನಾಡಿ, ‘ಸುಮಾರು 5 ರಿಂದ 6 ವರ್ಷದ ಗಂಡು ಚಿರತೆ ಸೆರೆಯಾಗಿದ್ದು, ವೈದ್ಯಕೀಯ ಪರೀಕ್ಷೆ ನಂತರ ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಸ್ಥಳಾಂತರ ಮಾಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.