ADVERTISEMENT

ಕಿಕ್ಕೇರಿ: ‘ಅಭಿವೃದ್ಧಿಗಾಗಿ ಹಣಕ್ಕಾಗಿ ಬೇಡುವ ಸ್ಥಿತಿ’

​ಪ್ರಜಾವಾಣಿ ವಾರ್ತೆ
Published 20 ಮೇ 2025, 13:27 IST
Last Updated 20 ಮೇ 2025, 13:27 IST
ಕಿಕ್ಕೇರಿ ಹೋಬಳಿಯ ಊಗಿನಹಳ್ಳಿ ಗ್ರಾಮದ ರಸ್ತೆ, ಒಳಚರಂಡಿ ಕಾಮಗಾರಿಗೆ ಶಾಸಕ ಎಚ್.ಟಿ. ಮಂಜು ಸೋಮವಾರ ಭೂಮಿಪೂಜೆ ನೆರವೇರಿಸಿದರು. ಸಿ.ಎನ್. ಪುಟ್ಟಸ್ವಾಮಿಗೌಡ, ಬಿ.ಎಂ. ಕಿರಣ್, ಕಾಯಿ ಮಂಜೇಗೌಡ ಭಾಗವಹಿಸಿದ್ದರು
ಕಿಕ್ಕೇರಿ ಹೋಬಳಿಯ ಊಗಿನಹಳ್ಳಿ ಗ್ರಾಮದ ರಸ್ತೆ, ಒಳಚರಂಡಿ ಕಾಮಗಾರಿಗೆ ಶಾಸಕ ಎಚ್.ಟಿ. ಮಂಜು ಸೋಮವಾರ ಭೂಮಿಪೂಜೆ ನೆರವೇರಿಸಿದರು. ಸಿ.ಎನ್. ಪುಟ್ಟಸ್ವಾಮಿಗೌಡ, ಬಿ.ಎಂ. ಕಿರಣ್, ಕಾಯಿ ಮಂಜೇಗೌಡ ಭಾಗವಹಿಸಿದ್ದರು   

ಕಿಕ್ಕೇರಿ: ಈಗಿನ ಸರ್ಕಾರದಲ್ಲಿ ಅಭಿವೃದ್ಧಿಗಾಗಿ ಹಣಕ್ಕಾಗಿ ಬೇಡುವ ದೀನ ಸ್ಥಿತಿ ಬಂದಿದೆ ಎಂದು ಶಾಸಕ ಎಚ್.ಟಿ. ಮಂಜು ಹೇಳಿದರು.

ಹೋಬಳಿಯ ಊಗಿನಹಳ್ಳಿ, ಗೊಂದಿಹಳ್ಳಿ, ಮಾದಾಪುರ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಕಾವೇರಿ ನೀರಾವರಿ ನಿಗಮದಿಂದ ಪ್ರಗತಿಪಥ ಯೋಜನೆಯಡಿ ಕಾಮಗಾರಿ ಆರಂಭಿಸಲಾಗಿದೆ. ಗುಣಮಟ್ಟದ ಕಾಮಗಾರಿ ವೀಕ್ಷಣೆಯನ್ನು ಸ್ಥಳೀಯರು ಗಮನಹರಿಸಿ. ಗ್ರಾಮಗಳಿಗೆ ಕನಿಷ್ಠ ಮೂಲಸೌಲಭ್ಯ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಅನುದಾನ ನೀಡದೆ ಸತಾಯಿಸುತ್ತಿದೆ. ಬಹಳ ಭರವಸೆ ಇಟ್ಟುಕೊಂಡು ಬಂದಿರುವೆ’ ಎಂದು ಬೇಸರಿಸಿದರು.

ADVERTISEMENT

ರಾಜ್ಯ ಮಾರಾಟ ಮಹಾಮಂಡಲ ನಿರ್ದೇಶಕ ಸಿ.ಎನ್. ಪುಟ್ಟಸ್ವಾಮಿಗೌಡ, ಆನೆಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಎಂ. ಕಿರಣ್, ಜೆಡಿ‌ಎಸ್ ಹೋಬಳಿ ಅಧ್ಯಕ್ಷ ಕಾಯಿ ಮಂಜೇಗೌಡ ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.