ಅಪಘಾತ
–ಪ್ರಾತಿನಿಧಿಕ ಚಿತ್ರ
ಹಲಗೂರು: ಬಸ್ ಮತ್ತು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ 8 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹಲಗೂರು ಸಮೀಪದ ಬಾಣಸಮುದ್ರ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ.
ಕನಕಪುರ ತಾಲ್ಲೂಕು ಕಗ್ಗಲೀಪುರ ಗ್ರಾಮದ ಗುರುಸ್ವಾಮಿ, ಬ್ಯಾಟರಾಜು, ಕಾಂತರಾಜು, ವೆಂಕಟಪ್ಪ, ಸಂಜಯ್, ಚಂದು, ಚಂದನ್ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಳವಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮುಂದೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದಾನೆ.
ಕಾರಿನಲ್ಲಿದ್ದ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಪಟ್ಟಣದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲಗೂರು ಪಿಎಸ್ಐ ಲೋಕೇಶ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.