ADVERTISEMENT

ನಾಗತಿಹಳ್ಳಿ ಬಳಿ ಭೀಕರ ಅಪಘಾತ: ಐವರು ಸಾವು, ಮೂವರಿಗೆ ತೀವ್ರ ಗಾಯ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2022, 17:15 IST
Last Updated 11 ಡಿಸೆಂಬರ್ 2022, 17:15 IST
   

ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ನಾಗತಿಹಳ್ಳಿ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಕಾರು ಮುಖಾಮುಖಿ ಡಿಕ್ಕಿಯಾಗಿ ಐವರು ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮೃತಪಟ್ಟವರ ಮಾಹಿತಿ ತಿಳಿದು ಬಂದಿಲ್ಲ, ಇನ್ನೊವಾ ಹಾಗೂ ಸ್ವಿಫ್ಟ್‌ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ತಮಿಳುನಾಡು ಮೂಲದ ಇನ್ನೊವಾ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್‌ ಕಾರ್‌ ಮೇಲೆ ಬಿದ್ದಿದೆ. ಸ್ವಿಫ್ಟ್‌ ಕಾರ್‌ನಲ್ಲಿದ್ದ ಹಾಸನ ಮೂಲದ ಮೂವರು ಹಾಗೂ ಇನ್ನೊವಾ ಕಾರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊವಾ ಕಾರ್‌ನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಳೆಯಿಂದ ರಸ್ತೆಯಲ್ಲಿ ನೀರು ನಿಂತಿದ್ದು ವೇಗವಾಗಿ ಬರುತ್ತಿದ್ದ ಇನ್ನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಯಾಗಿದೆ. ಮೃತಪಟ್ಟವರು ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಿಂಡಿಗನವಿಲೆ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.