ADVERTISEMENT

ಪಾಂಡವಪುರ: ಪೊಲೀಸ್ ಠಾಣೆಯಲ್ಲಿದ್ದ ವಾಹನಗಳಿಗೆ ಆಕಸ್ಮಿಕ ಬೆಂಕಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2024, 14:28 IST
Last Updated 10 ಏಪ್ರಿಲ್ 2024, 14:28 IST
ಪಾಂಡವಪುರ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ವಾಹನಗಳಿಗೆ ಆಕಸ್ಮಿಕ ಬೆಂಕಿ ತಗುಲಿದ್ದರಿಂದ ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳ ತಂಡ
ಪಾಂಡವಪುರ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ವಾಹನಗಳಿಗೆ ಆಕಸ್ಮಿಕ ಬೆಂಕಿ ತಗುಲಿದ್ದರಿಂದ ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳ ತಂಡ   

ಪಾಂಡವಪುರ: ಪೊಲೀಸ್ ಠಾಣೆ ಪಕ್ಕ ನಿಲ್ಲಿಸಿದ್ದ ವಾಹನಗಳಿಗೆ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಭಸ್ಮಗೊಂಡಿದೆ.

ಅಪಘಾತ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡು ಠಾಣೆಯ ಹಿಂಭಾಗ ನಿಲ್ಲಿಸಿದ್ದ ಆಟೋ, ಗೂಡ್ಸ್‌ ಆಟೊ, ವ್ಯಾನ್, ಕಾರು, ಜೆಸಿಬಿ ಸೇರಿದಂತೆ ಇತರ ವಾಹನಗಳಿಗೆ ಆಕಸ್ಮಿಕ ಬೆಂಕಿ ತಗುಲಿತು.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರೂ, ಬೆಂಕಿಯ ತೀವ್ರತಗೆ ವಾಹನಗಳಲ್ಲಿದ್ದ ಬ್ಯಾಟರಿ ಸಿಡಿದವು. ಕಾರಿನ ಸೀಟು ಮತ್ತು ಟೈರ್‌ಗಳು ಹತ್ತಿ ಉರಿದವು. ಬೆಂಕಿ ಅವಘಡದಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.