ಮಂಡ್ಯ: ವಿವಾಹವಾಗುವುದಾಗಿ ನಂಬಿಸಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಕೆ.ಆರ್. ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕೆ.ಆರ್. ಪೇಟೆ ತಾಲ್ಲೂಕಿನ ಗ್ರಾಮವೊಂದರ ಲಕ್ಷ್ಮಣ ಎಂಬಾತ ಬಂಧಿತ ಆರೋಪಿ. ಆಟೊ ಚಾಲಕನಾಗಿದ್ದ ಈತ ಬಾಲಕಿಯ ಜೊತೆ ಸ್ನೇಹ ಬೆಳೆಸಿ ಪ್ರೀತಿಯ ನಾಟಕವಾಡಿದ್ದ.
ವಿವಾಹ ಆಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ನಂತರ ವಿಹಾಹವಾಗದೇ ವಂಚಿಸಿದ್ದ.
ಯುವತಿ 5 ತಿಂಗಳ ಗರ್ಭಿಣಿ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ಪೋಷಕರು ದೂರು ಸಲ್ಲಿಸಿದ್ದಾರೆ.
ಬಂಧನದ ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.