ADVERTISEMENT

ಮಂಡ್ಯ | ಡಾ.ರಾಜ್‌ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 6:16 IST
Last Updated 16 ಆಗಸ್ಟ್ 2025, 6:16 IST
<div class="paragraphs"><p>ಸಾಮಾಜಿಕ ಜಾಲತಾಣ</p></div>

ಸಾಮಾಜಿಕ ಜಾಲತಾಣ

   

ರಾಯಿಟರ್ಸ್ ಚಿತ್ರ

ಮಂಡ್ಯ: ಡಾ.ರಾಜ್‌ಕುಮಾರ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಮಂಗಳೂರಿನ ವಿನೋದ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸಾಮಾಜಿಕ ಜಾಲತಾಣಗಳ ದುರ್ಬಳಕೆಗೆ ಸರ್ಕಾರ ಕಡಿವಾಣ ಹಾಕಬೇಕು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಡಿ.ಅಶೋಕ್ ಒತ್ತಾಯಿಸಿದರು.

ADVERTISEMENT

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಹಿರಿಯ ನಟಿಯರಾದ ಗೀತಾ, ಲಕ್ಷ್ಮಿ ಅವರ ಬಗ್ಗೆಯೂ ಅವಹೇಳನಾಕಾರಿಯಾಗಿ ಮಾತನಾಡಿದ್ದಾನೆ. ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲಾಗುವುದು ಎಂದರು. ಜಯಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಯೋಗಣ್ಣ,  ರವೀಂದ್ರಕುಮಾರ್, ಶ್ರೀನಿವಾಸ್, ದೇವರಾಜು, ಜೆ.ನಾರಾಯಣ, ಕಾರ್ತಿಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.