ADVERTISEMENT

ಮೂಲ ಸೌಲಭ್ಯ ಕಲ್ಪಿಸಲು ಕ್ರಮ: ಶಶಿಕಲಾ

​ಪ್ರಜಾವಾಣಿ ವಾರ್ತೆ
Published 14 ಮೇ 2025, 14:40 IST
Last Updated 14 ಮೇ 2025, 14:40 IST
ಹಲಗೂರಿನ ಕೆ.ಪಿ.ಎಸ್ ಸಭಾಂಗಣದಲ್ಲಿ ಬುಧವಾರ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಶಶಿಕಲಾ, ಲತಾ, ಚೆಂದಿಲ್, ಶಿವಕುಮಾರ್ ಹಾಜರಿದ್ದರು
ಹಲಗೂರಿನ ಕೆ.ಪಿ.ಎಸ್ ಸಭಾಂಗಣದಲ್ಲಿ ಬುಧವಾರ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಶಶಿಕಲಾ, ಲತಾ, ಚೆಂದಿಲ್, ಶಿವಕುಮಾರ್ ಹಾಜರಿದ್ದರು   

ಹಲಗೂರು: ‘ವಿದ್ಯಾರ್ಥಿಗಳು ತಾವು ಕಲಿಯುವ ಶಾಲೆಗಳು ಮತ್ತು ವಾಸಿಸುವ ಸ್ಥಳದಲ್ಲಿ ಮೂಲಸೌಲಭ್ಯಗಳ ಕೊರತೆ ಇದ್ದರೆ ಗ್ರಾಮ ಪಂಚಾಯತಿ ಗಮನಕ್ಕೆ ತನ್ನಿ. ಸ್ಥಳೀಯ ಆಡಳಿತದಿಂದ ಸಮಸ್ಯೆ ನಿವಾರಣೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು’ ಎಂದು ಹಲಗೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶಶಿಕಲಾ ತಿಳಿಸಿದರು.

ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಬುಧವಾರ ಆಯೋಜಿಸಿದ್ದ ಮಕ್ಕಳ ಗ್ರಾಮ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಿಡಿಒ ಕೆ.ಚೆಂದಿಲ್ ಮಾತನಾಡಿ, ‘ಶಾಲೆಗಳು ಮತ್ತು ಮನೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಮಕ್ಕಳು ಯಾವುದೇ ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದರೆ ಸಹಾಯವಾಣಿ 1098ಕ್ಕೆ ಕರೆ ಮಾಡಿ. ಸಂಬಂಧಿಸಿದ ಇಲಾಖೆಯ ವತಿಯಿಂದ ಸೂಕ್ತ ನ್ಯಾಯ ದೊರಕಿಸಲು ಶ್ರಮಿಸಲಾಗುವುದು’ ಎಂದರು.

ADVERTISEMENT

ಕೆ.ಪಿ.ಎಸ್ ಶಾಲೆಯ ಉಪ ಪ್ರಾಂಶುಪಾಲೆ ಅನುರಾಧ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸಿ.ಲತಾ, ಕಾರ್ಯದರ್ಶಿ ಶಿವಕುಮಾರ್, ಬಿಲ್ ಕಲೆಕ್ಟರ್ ಆನಂದ್, ಅರಿವು ಕೇಂದ್ರದ ಮೇಲ್ವಿಚಾರಕ ಶಿವನಂಜು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಕೆ.ಬಿ.ಜಯಶಂಕರ್, ಶೋಭಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.