ADVERTISEMENT

ಪೌರಕಾರ್ಮಿಕರ ಸಮಸ್ಯೆ ಇತ್ಯರ್ಥಕ್ಕೆ ಕ್ರಮ: ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 7:32 IST
Last Updated 4 ಅಕ್ಟೋಬರ್ 2025, 7:32 IST
ಕೆ.ಆರ್. ಪೇಟೆ ಪಟ್ಟಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು 
ಕೆ.ಆರ್. ಪೇಟೆ ಪಟ್ಟಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು    

ಕೆ.ಆರ್.ಪೇಟೆ: ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ದುಡಿಯುತ್ತಿರುವ ಪೌರ ಕಾರ್ಮಿಕರ ಕೊಡುಗೆ ಅಪಾರ ಎಂದು ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್ ಹೇಳಿದರು.

ಪಟ್ಟಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಹಲವು ತಾಂತ್ರಿಕ ಕಾರಣಗಳಿಂದ ಕಳೆದ ಕೆಲವು ತಿಂಗಳುಗಳಿಂದ ಪೌರಕಾರ್ಮಿಕರಿಗೆ ವೇತನವನ್ನು ನೀಡಲು ಸಾಧ್ಯವಾಗದಿರುವದಿಕ್ಕೆ ಬೇಸರವಾಗಿದೆ. ಸಮಸ್ಯೆ ಬಗೆಹರಿಸಲು ಪ್ರಾಮಾಣೀಕವಾಗಿ ಪ್ರಯತ್ನಿಸಲಾಗುತ್ತಿದೆ’ ಎಂದರು.

‘ಆದರೆ ಅವರಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಮನೆ ಹಾಗೂ ನಿವೇಶನಗಳನ್ನು ವಿತರಿಸಲು, ಸಮವಸ್ತ್ರ ಕೈಗವಸುಗಳು , ಬೂಟು, ಮಧ್ಯಾಹ್ನದ ಊಟ ಸೇರಿದಂತೆ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಮಂಡಲಿ  ಕಾರ್ಯೋನ್ಮುಖವಾಗಿದೆ’ ಎಂದರು.

ADVERTISEMENT

ವಿವಿಧ ಆಟೋಟಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ್ದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಿ, ಸನ್ಮಾನಿಸಿದರು. 

ಪುರಸಭೆಯ ಹಿರಿಯ ಸದಸ್ಯರಾದ ಕೆ. ಸಿ. ಮಂಜುನಾಥ್ ಮತ್ತು ಡಿ. ಪ್ರೇಮ್ ಕುಮಾರ್ ಮಾತನಾಡಿ, ಕೇವಲ 9 ಜನ ಪೌರಕಾರ್ಮಿಕರಿಗೆ ಮಾತ್ರ ಮನೆಗಳನ್ನು ವಿತರಣೆ ಮಾಡಲಾಗಿದ್ದು ಐವತ್ತಕ್ಕೂ ಹೆಚ್ಚು ಕುಟುಂಬಗಳು ಸ್ವಂತ ಮನೆ ಇಲ್ಲದೆ ಪರಿತಪಿಸುತ್ತಿದ್ದು ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸಿದರು.

ಪುರಸಭೆ ಉಪಾಧ್ಯಕ್ಷೆ ಸೌಭಾಗ್ಯ ಉಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎನ್.ಪ್ರವೀಣ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಚೆಲುವರಾಜು, ಮೇಸ್ತ್ರಿ ಮುತ್ತಯ್ಯ, ಸದಸ್ಯರಾದ ಕೆ.ಆರ್.ರವೀಂದ್ರಬಾಬು, ಬಸ್ ಸಂತೋಷ್ ಕುಮಾರ್, ಎಚ್.ಆರ್. ಲೋಕೇಶ್, ಶಾಮಿಯಾನ ತಿಮ್ಮೇಗೌಡ, ಪ್ರಮೋದ್ ಕುಮಾರ್, ಇಂದ್ರಾಣಿ ವಿಶ್ವನಾಥ್, ಶುಭಗಿರೀಶ್, ಶೋಭಾ ದಿನೇಶ್, ಮಹೇಶ್, ಕಲ್ಪನಾ ದೇವರಾಜು, ಕೆ.ಸಿ.ವಾಸು, ಮುಖ್ಯಾಧಿಕಾರಿ ಅಶೋಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.