ಕೆ.ಆರ್.ಪೇಟೆ: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಗಳಾಗಿದ್ದು, ಅವುಗಳ ಉಳಿವು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ’ ಎಂದು ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ. ಅಶೋಕ್ ಹೇಳಿದರು.
ಪಟ್ಟಣದ ಪುರಸಭಾ ವ್ಯಾಪ್ತಿಯ ಹೊಸಹೊಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಗ್ರಾಮೀಣ ಪ್ರದೇಶಗಳಲ್ಲಿ ಹಾಲಿನ ಡೇರಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಎರಡು ಕಣ್ಣುಗಳು. ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ರೈತರು ಅದನ್ನೇ ಅವಲಂಬಿಸಿದ್ದಾರೆ. ಈ ಸಹಕಾರ ಸಂಘ ತಾಲ್ಲೂಕಿನಲ್ಲಿಯೇ ಉತ್ತಮ ನಿವ್ವಳ ಲಾಭಹೊಂದಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿ ಷೇರುದಾರರಿಗೆ ಸಹಕಾರಿಯಾಗಿದೆ’ ಎಂದರು.
ಸಂಘದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಮೋದ್ ಲೆಕ್ಕಪರಿಶೋಧನಾ ವರದಿಯನ್ನು ಓದಿದರು. ಸಂಘದ ಉಪಾಧ್ಯಕ್ಷ ಚಂದ್ರಶೇಖರ್, ನಿರ್ದೇಶಕರಾದ ಎಸ್.ಪ್ರಕಾಶ್, ತೇಜಾವತಿ, ಯೋಗೇಶ್, ಅಭಿಶೇಖರ್, ಕೃಷ್ಣೇಗೌಡ, ಶಶಿಧರ್, ಎಚ್.ಆರ್. ಶ್ರೀಧರ್, ಎಚ್.ಎನ್. ಪ್ರವೀಣ್, ಗೀತಾ, ಎಚ್.ಎಂ. ಕೃಷ್ಣ, ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.