ನಾಗಮಂಗಲ: ಆದಿಚುಂಚನಗಿರಿ ಮಠದ ದೇವಾಲಯಗಳಲ್ಲಿ ಶುಕ್ರವಾರ ವಿಶೇಷ ಪೂಜೆ, ಹೋಮಹವನಗಳೊಂದಿಗೆ ನಾಗರ ಪಂಚಮಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಜರುಗಿತು.
ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದೇವಾಲಯ, ಗಂಗಾಧರೇಶ್ವರ ಸ್ವಾಮಿ ದೇವಾಲಯ ಸೇರಿ ಎಲ್ಲಾ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಜರುಗಿದವು. ಅಲ್ಲದೇ ಸ್ವಾಮೀಜಿ ಕ್ಷೇತ್ರದ ನಾಗರ ವಿಗ್ರಹಕ್ಕೆ ವಿಶೇಷ ಅಭಿಷೇಕ ನೆರವೇರಿಸಿದರು. ನಂತರ ಹೋಮಹವನ ಜರುಗಿದವು. ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಅಲ್ಲದೇ ಸ್ವಾಮೀಜಿ ನವಗ್ರಹ ವನದಲ್ಲಿ ಗಿಡನೆಡುವ ಮೂಲಕ ಪೂಜೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ ಸೇರಿ ಭಕ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.