ADVERTISEMENT

ಮೇ 31ರಿಂದ ಮತ್ತೆ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್‌

ಕೊರೊನಾ ನಿಯಂತ್ರಣಕ್ಕೆ ಮತ್ತೆ ಲಾಕ್‌ಡೌನ್‌ ಮೊರೆ ಹೋದ ಜಿಲ್ಲಾಡಳಿತ

​ಪ್ರಜಾವಾಣಿ ವಾರ್ತೆ
Published 28 ಮೇ 2021, 15:32 IST
Last Updated 28 ಮೇ 2021, 15:32 IST

ಮಂಡ್ಯ: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ನಾಲ್ಕು ದಿನಗಳ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಿದ್ದು, ಮೇ 31ರಿಂದ ಮತ್ತೆ ನಾಲ್ಕು ದಿನಗಳ ಲಾಕ್‌ಡೌನ್‌ ಅನ್ನು ಘೋಷಿಸಿದೆ.

ಮೇ 31, ಜೂನ್‌ 1, 3, 4ರಂದು ವೈದ್ಯಕೀಯ ಸೇವೆ, ಹಾಲಿನ ಬೂತ್‌, ನ್ಯಾಯಬೆಲೆ ಅಂಗಡಿ, ಕೃಷಿ ಚಟುವಟಿಕೆಗಳ ಪೂರಕ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಅವರು ಆದೇಶ ಹೊರಡಿಸಿದ್ದಾರೆ.

ಮೇ 30, ಜೂನ್‌ 2 ಹಾಗೂ 5 ರಂದು ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ADVERTISEMENT

ಹಾಪ್‌ಕಾಮ್ಸ್‌, ಹಾಲಿನ ಬೂತ್‌ಗಳು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಜೂನ್‌ 2, 5 ರಂದು ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಬ್ಯಾಂಕ್‌ಗಳು ವ್ಯವಹರಿಸಲು ಅವಕಾಶ ನೀಡಲಾಗಿದೆ. ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.