ADVERTISEMENT

‘ಅಭಿವೃದ್ಧಿಗೆ ಒತ್ತು ನೀಡಿದ್ದ ಅಂಬರೀಷ್‌’

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2024, 15:37 IST
Last Updated 14 ಡಿಸೆಂಬರ್ 2024, 15:37 IST
ಮಂಡ್ಯ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಪತ್ರಕರ್ತರ ಸಂಘದಿಂದ ಸನ್ಮಾನಿಸಲಾಯಿತು
ಮಂಡ್ಯ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಪತ್ರಕರ್ತರ ಸಂಘದಿಂದ ಸನ್ಮಾನಿಸಲಾಯಿತು   

ಮಂಡ್ಯ: ‘ಅಂಬರೀಷ್‌ ಅವರ ಅಧಿಕಾರಾವಧಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿದರೆ ಸಂತೃಪ್ತಿಯ ಮನೋಭಾವ ಮೂಡುತ್ತದೆ’ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಹೇಳಿದರು.

ನಗರದ ಪತ್ರಕರ್ತರ ಭವನದ ಮೇಲಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದರ ಅಂಗವಾಗಿ ಶನಿವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಸಣ್ಣ ಸಮುದಾಯ ಭವನದಿಂದ ಹಿಡಿದು ಬೃಹತ್ ಅಭಿವೃದ್ಧಿ ಕಾರ್ಯಗಳವರೆಗೂ ಕೆಲಸ ಮಾಡಿ ಅಂಬರೀಷ್‌ ಅವರು ಹೆಸರು ಮಾಡಿದ್ದಾರೆ. ಅವರ ಕೆಲಸವನ್ನು ಮುಂದುವರಿಸಿದ್ದು, ಅಪೂರ್ಣಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಲು ಲೋಕಸಭಾ ಸದಸ್ಯೆಯಾಗಿದ್ದಾಗ ಪ್ರಯತ್ನಿಸಿದ್ದೇನೆ’ ಎಂದರು.

ADVERTISEMENT

ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಮಾಜಿ ಅಧ್ಯಕ್ಷ ಪಿ.ಜೆ.ಚೈತನ್ಯಕುಮಾರ್, ಉಪಾಧ್ಯಕ್ಷ ನವೀನ್‌ ಕುಮಾರ್, ಖಜಾಂಚಿ ನಂಜುಂಡಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.