ADVERTISEMENT

ಶ್ರೀರಂಗಪಟ್ಟಣ: ಅಂಬೇಡ್ಕರ್‌ ಭವನಕ್ಕೆ ಅನುದಾನ ನೀಡಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 6:15 IST
Last Updated 4 ಫೆಬ್ರುವರಿ 2026, 6:15 IST
ಶ್ರೀರಂಗಪಟ್ಟಣ ತಾಲ್ಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ದಲಿತ ಮುಖಂಡರು ಮಂಗಳವಾರ ಪಟ್ಟಣದ ತಾ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ದಲಿತ ಮುಖಂಡರು ಮಂಗಳವಾರ ಪಟ್ಟಣದ ತಾ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಶ್ರೀರಂಗಪಟ್ಟಣ: ತಾಲ್ಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ದಲಿತ ಮುಖಂಡರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ತಾ.ಪಂ. ಕಚೇರಿ ಆವರಣದಲ್ಲಿ ಮೂರು ತಾಸುಗಳ ಕಾಲ ಪ್ರತಿಭಟನೆ ನಡೆಯಿತು. ಹೊಂಗಹಳ್ಳಿಯಲ್ಲಿ ₹6 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್‌ ಭವನ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಆದರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನುದಾನ ತಡೆ ಹಿಡಿಯುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಎಂಜಿನಿಯರ್‌ಗೆ ಪತ್ರ ಬರೆದಿದ್ದರು. ಸದರಿ ಪತ್ರವನ್ನು ಹಿಂಪಡೆದು ಅನುದಾನ ಕೊಡಿಸಬೇಕು ಎಂದು ಹುಲಿಕೆರೆ ಗ್ರಾ.ಪಂ. ಸದಸ್ಯ ಬಂಗಾರಪ್ಪ ಆಗ್ರಹಿಸಿದರು.

ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ. ವೇಣು, ‘ಹೊಂಗಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲು ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಅದನ್ನು ನಿವಾರಿಸಲಾಗಿದ್ದು ನಿಗದಿತ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ’ ಎಂದು ಭರವಸೆ ನೀಡಿದರು.

ADVERTISEMENT

ಗ್ರಾ.ಪಂ. ಮಾಜಿ ಸದಸ್ಯೆ ಮಂಚಮ್ಮ, ದಲಿತ ಮುಖಂಡರಾದ ಮಹದೇಪುರ ಪುಟ್ಟಸ್ವಾಮಿ, ಮಹದೇವಸ್ವಾಮಿ, ಪಾಂಡು, ಮರಗಾಲ ಸುರೇಶ್, ಕೆ.ಶೆಟ್ಟಹಳ್ಳಿ ಸುರೇಶ್ ಕುಮಾರ್‌, ಅರಕೆರೆ ಸುರೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.