ADVERTISEMENT

19ರಂದು ‘ಅಂಬೇಡ್ಕರ್ ಹಬ್ಬ’

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 14:29 IST
Last Updated 16 ಏಪ್ರಿಲ್ 2025, 14:29 IST

ಪಾಂಡವಪುರ: ಡಾ. ಬಿ.ಆರ್.ಅಂಬೇಡ್ಕರ್ ಮೆಮೋರಿಯಲ್ ಎಜುಕೇಷನ್ ಅಸೋಸಿಯೇಷನ್ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ 19ರಂದು ‘ಅಂಬೇಡ್ಕರ್ ಹಬ್ಬ–2025’ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಜೆ.ಅಂದಾನಯ್ಯ ತಿಳಿಸಿದರು.

‘ಪಟ್ಟಣದ ಪ್ರವಾಸಿ ಮಂದಿರದ ಪಕ್ಕದ ಡಾ.ಬಿ.ಆರ್.ಅಂಬೇಡ್ಕರ್ ಮೆಮೋರಿಯಲ್ ಎಜುಕೇಷನ್ ಅಸೋಸಿಯೇಷನ್ ಜಾಗದಲ್ಲಿ ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಪೌರಕಾರ್ಮಿಕರ ಮಕ್ಕಳು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ರಾಮನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಿ.ಉಮಾಶಂಕರ್, ಮೈಸೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರದ ಅಧ್ಯಾಪಕಿ ಎಚ್.ಕೆ. ಕಲಾವತಿ ಹಾಗೂ ನಟ ಅಹಿಂಸಾ ಚೇತನ್ ಪ್ರಧಾನ ಭಾಷಣ ಮಾಡಲಿದ್ದಾರೆ. ದೊಡ್ಡಬ್ಯಾಡರಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾದ ತೇಜಸ್ ಮತ್ತು ರುಚಿತಾ ಅವರು ಅಂಬೇಡ್ಕರ್ ಕುರಿತು ಕಿರು ಭಾಷಣ ಮಾಡಲಿದ್ದಾರೆ. ಡಾ.ಬಿ.ಆರ್‌.ಅಂಬೇಡ್ಕರ್ ಮೆಮೋರಿಯಲ್ ಎಜುಕೇಷನ್ ಅಸೋಸಿಯೇಷನ್ ಅಧ್ಯಕ್ಷ ಜೆ.ಅಂದಾನಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

ಗಾಯಕರಾದ ಎಚ್.ಜಿ. ಗೋವಿಂದರಾಜು ಹಾಗೂ ಹುರುಗಲವಾಡಿ ರಾಮಯ್ಯ ಅವರು ಅಂಬೇಡ್ಕರ್ ಮತ್ತು ಪರಿವರ್ತನಾ ಗೀತೆಗಳನ್ನು ಹಾಡಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಮೋರಿಯಲ್ ಎಜುಕೇಷನ್ ಅಸೋಸಿಯೇಷನ್ ಕಾರ್ಯದರ್ಶಿ ಎಸ್‌.ಟಿ. ದೊಡ್ಡವೆಂಕಟಯ್ಯ, ಖಜಾಂಚಿ ವೆಂಕಟೇಶ್, ದಲಿತ ಸಂಘರ್ಷ ಸಮಿತಿ ಮುಖಂಡರಾದ ಡಿ.ಕೆ. ಅಂಕಯ್ಯ, ಸೋಮಶೇಖರ್ ಹಾರೋಹಳ್ಳಿ, ಕಾಂಗ್ರೆಸ್ ಎಸ್‌ಸಿ, ಎಸ್‌ಟಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಬಿ. ರಾಮು, ಜೆಡಿಎಸ್ ಎಸ್‌ಸಿ ಎಸ್‌ಟಿ ತಾಲ್ಲೂಕು ಘಟಕದ ಅಧ್ಯಕ್ಷ ಬೊಮ್ಮರಾಜು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.