ADVERTISEMENT

ಮಂಡ್ಯ | ಮನ ಪರಿವರ್ತನೆಗಿಳಿದ ಅಂಬಿಗರ ಚೌಡಯ್ಯ ಪ್ರಸ್ತುತ: ಶಿವಾನಂದಮೂರ್ತಿ

ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 5:00 IST
Last Updated 22 ಜನವರಿ 2026, 5:00 IST
ಮಂಡ್ಯದಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಪುಷ್ಪಾರ್ಚನೆ ಮಾಡಿದರು
ಮಂಡ್ಯದಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಪುಷ್ಪಾರ್ಚನೆ ಮಾಡಿದರು   

ಮಂಡ್ಯ: ‘ವಚನಗಳ ಮೂಲಕ ಜಾತಿ ವ್ಯವಸ್ಥೆ ಹಾಗೂ ಮೌಢ್ಯದ ವಿರುದ್ಧ ಜನರ ಮನ ಪರಿವರ್ತನೆ ಮಾಡಲು ಹೊರಟ ಅಂಬಿಗರ ಚೌಡಯ್ಯ ಅವರು ಇಂದಿಗೂ ಪ್ರಸ್ತುತವಾಗಿ ನಿಲ್ಲುತ್ತಾರೆ. ಅವರ ವಚನಗಳನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ಮಕ್ಕಳಿಗೂ ಪರಿಚಯಿಸುವ ಕೆಲಸ ಆಗಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಬಿಗರ ಚೌಡಯ್ಯ ಅವರು ಹಲವು ವಚನಗಳನ್ನು ರಚಿಸುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಿರುವುದು ವಿಶೇಷವಾಗಿದೆ. ಇವರು 12ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ಹೋಗಲಾಡಿಸಲು ಶ್ರಮಪಟ್ಟು, ತಮ್ಮ ವಚನಗಳ ಮೂಲಕ ಸಂದೇಶ ಸಾರಿದರು’ ಎಂದರು.

ADVERTISEMENT

ನಿವೃತ್ತ ಪ್ರಾಂಶುಪಾಲ ಎಸ್.ಬಿ.ಶಂಕರೇಗೌಡ ಮಾತನಾಡಿ, ‘ಅನೇಕ ವಚನಗಳನ್ನು ರಚಿಸುವ ಮೂಲಕವೇ ಅಂಬಿಗರ ಚೌಡಯ್ಯ ಎಂಬುದೇ ಅವರ ವಚನಗಳ ಅಂಕಿತವಾಗಿದೆ. ಅನೇಕ ವಚನಗಳನ್ನು ರಚಿಸುವ ಮೂಲಕ ಸಮಾಜದ ಅಂಕು ಡೊಂಕು ತಿದ್ದಿರುವ ಇವರ ನಡೆ ಎಲ್ಲರಿಗೂ ಮಾರ್ಗದರ್ಶನವಾಗಿದೆ’ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್, ಮುಖಂಡರಾದ ಎಲ್‌.ಸಂದೇಶ್‌, ಬಿ ಲಿಂಗಯ್ಯ, ಈರಯ್ಯ, ಜೆ.ರಾಜಶೇಖರಯ್ಯ, ಬಿ.ಎಸ್.ಅನುಪಮಾ ಭಾಗವಹಿಸಿದ್ದರು. 

Highlights - ವಚನಗಳ ಮೂಲಕ ಸಂದೇಶ ಸಾರಿದ ಚೌಡಯ್ಯ ವಿದ್ಯಾರ್ಥಿ ದೆಸೆಯಲ್ಲಿಯೇ ವಚನ ಪರಿಚಯಿಸಿ ಅನುಭವಿ ವಚನಗಾರ ಅಂಬಿಗರ ಚೌಡಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.