ಹಲಗೂರು: ಸಮೀಪದ ಅಂತರವಳ್ಳಿಯಿಂದ ಗೊಲ್ಲರದೊಡ್ಡಿ ಮೂಲಕ ಹೊಸಪುರ ತಲುಪುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಉತ್ತಮ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಪ್ರತಿಭಟನೆ ನಡೆಸಿದರು.
ಗ್ರಾಮದ ಡಾ.ನಾಗೇಶ್ ಮಾತನಾಡಿ, ‘ಈ ರಸ್ತೆಗೆ ಹೊಂದಿಕೊಂಡಂತೆ ಕೃಷಿ ಚಟುವಟಿಕೆಗೆ ನೂರಾರು ರೈತರು 3 ಕಿ.ಮೀ ದೂರದ ರಸ್ತೆಯನ್ನು ಬಳಸಬೇಕು. ಮಳೆ ಬಿದ್ದರೆ ರಸ್ತೆಯ ತುಂಬಾ ಗುಂಡಿಯಾಗಿ ರಾಡಿ ತುಂಬಿಕೊಳ್ಳುತ್ತದೆ. ಮಳೆಗಾಲದಲ್ಲಿ ಪಾದಚಾರಿಗಳು ನಡೆದಾಡಲೂ ಸಾಧ್ಯವಾಗುತ್ತಿಲ್ಲ. ಕೂಡಲೇ ಸಂಬಂಧಿಸಿದವರು ಸೂಕ್ತ ರಸ್ತೆ ನಿರ್ಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.
‘40 ವರ್ಷಗಳಿಂದಲೂ ಜಮೀನುಗಳಿಗೆ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದೆನೆ. ಹಲವು ಬಾರಿ ಮನವಿ ಮಾಡಿದರೂ ಇದುವರೆಗೂ ಒಂದು ರಸ್ತೆ ನಿರ್ಮಿಸುವ ಕಾರ್ಯಕ್ಕೆ ಸರ್ಕಾರ ಗಮನ ಹರಿಸುತ್ತಿಲ್ಲ’ ಎಂದು ಸೈಕಲ್ ಸವಾರ ರೈತ ಮಹದೇವಪ್ಪ ನೋವು ತೋಡಿಕೊಂಡರು.
ನಾಗೇಶ್, ಮಹದೇವಪ್ಪ, ಸುಂದ್ರಪ್ಪ, ರಮೇಶ್, ರಾಜೇಗೌಡ, ಆನಂದ, ನಾಗರಾಜು, ಜಯರಾಮ, ಸುನೀಲ್, ಮಹೇಶ್, ನಾಗ, ಕಾಂತರಾಜು, ಸ್ವಾಮಿ, ಶಿವ, ರಾಜೇಶ್, ಬಸವರಾಜು, ಯೋಗೇಶ್, ಮಾದಾಚಾರಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.