ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆ ಕೈಬಿಡುವುದು, ಕಾವೇರಿ ಆರತಿ ಬದಲು ಇದರ ಹಣವನ್ನು ಸರ್ಕಾರಿ ಶಾಲೆ ಉಳಿವಿಗೆ ಖರ್ಚು ಮಾಡಬೇಕು ಎಂದು ಒತ್ತಾಯಿಸಿ ಕನ್ನಡಸೇನೆ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕುಮಾರ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
‘ಜಿಲ್ಲಾ ಉಸ್ತುವಾರಿ ಸಚಿವರು, ಈಗಾಗಲೇ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆ ನಡೆಸಿದ್ದು, ಯೋಜನೆ ಕೈಬಿಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ದರು. ಆದರೆ, ಕಾಮಗಾರಿ ಮತ್ತೆ ಪ್ರಾರಂಭ ಮಾಡುವುದು ಏಕೆ’ ಎಂದು ಪ್ರಶ್ನಿಸಿದರು.
ವಿರೋಧದ ನಡುವೆಯೂ ಸಾರ್ವಜನಿಕರ ತೆರಿಗೆ ಹಣ ಬಳಕೆ ಮಾಡುವುದು ಎಷ್ಟರಮಟ್ಟಿಗೆ ಸರಿ? ಕೋಟಿ ಕೋಟಿ ವೆಚ್ಚ ಮಾಡುವ ಕಾವೇರಿ ಆರತಿ ಯಾವುದೇ ಕಾರಣಕ್ಕೂ ಬೇಡ, ಈ ಹಣವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ. ಮಂಜುನಾಥ್, ಮುಖಂಡರಾದ ಸೌಭಾಗ್ಯ, ಮಂಜುನಾಥ್, ಜಿ.ಮಹಾಂತಪ್ಪ, ಮಂಜುನಾಥ್, ಜಯಮ್ಮ, ಶಾಲಿನಿ, ಮಂಗಳಮ್ಮ, ವೇಣುಗೋಪಾಲ್, ಪ್ರಸನ್ನ, ರಾಘವೇಂದ್ರ, ರಘು, ಕುಮಾರ್, ಅಭಿಷೇಕ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.