ADVERTISEMENT

ಮಂಡ್ಯ ಅರಕೇಶ್ವರ ದೇಗುಲದ ಪೂಜಾರಿಗಳ ಹತ್ಯೆ: ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 10:09 IST
Last Updated 11 ಸೆಪ್ಟೆಂಬರ್ 2020, 10:09 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು:ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರ ಹತ್ಯೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರವಾಗಿ ಪರಿಗಣಿಸಿದ್ದಾರೆ.

'ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5ಲಕ್ಷ ರೂಪಾಯಿಪರಿಹಾರ ನೀಡಲಾಗುವುದು' ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.'ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಭರವಸೆ ನೀಡಿದ್ದಾರೆ.

'ಪೂಜಾರಿಗಳನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ' ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ADVERTISEMENT

ಹತ್ಯೆಯಾದ ಅರ್ಚಕರುದೇವರ ಪೂಜೆಯ ಉಸ್ತುವಾರಿ ಜೊತೆಗೆ ದೇವಾಲಯದ ಕಾವಲು ಕಾಯುತ್ತಿದ್ದರು. ಅರಕೇಶ್ವರ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ಆರೋಪಿಗಳ ಪತ್ಯೆಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಕಳ್ಳರು ಹುಂಡಿಯೊಳಗಿದ್ದ ಚಿಲ್ಲರೆ ಹಣವನ್ನು ಬಿಸಾಡಿ ನೋಟುಗಳನ್ನಷ್ಟೇ ದೋಚಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.