ADVERTISEMENT

140 ಸ್ಥಾನದಲ್ಲಿ ಗೆಲುವು: ಅರುಣ್‌ ಸಿಂಗ್‌

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 10:49 IST
Last Updated 1 ಸೆಪ್ಟೆಂಬರ್ 2021, 10:49 IST

ಕೆ.ಆರ್‌.ಪೇಟೆ (ಮಂಡ್ಯ ಜಿಲ್ಲೆ): ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲಿದೆ’ ಬಿಜೆಪಿ ರಾಜ್ಯ ಉಸ್ತುವಾರ ಅರುಣ್‌ಸಿಂಗ್‌ ಬುಧವಾರ ಹೇಳಿದರು.

ಹಾಸನಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಸಚಿವ ಕೆ.ಸಿ.ನಾರಾಯಣಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿದರು.

‘ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಗೊಳಿಸುವ ದೃಷ್ಟಿಯಿಂದ ಪಕ್ಷದ ಚಟುವಟಿಕೆಯನ್ನು ಈ ಭಾಗದಲ್ಲಿ ನಡೆಸಲಾಗುತ್ತಿದೆ. 2023ರ ಚುನಾವಣೆಯಲ್ಲಿ ಈ ಭಾಗದಿಂದ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.