ಬಂಧನ
(ಪ್ರಾತಿನಿಧಿಕ ಚಿತ್ರ)
ಮಳವಳ್ಳಿ: ತಾಲ್ಲೂಕಿನ ಮಾಗನೂರು ಗ್ರಾಮದ ಹೊರವಲಯದಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಗ್ರಾಮಾಂತರ ಪೊಲೀಸರು 9 ಮಂದಿಯನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ.
ಗ್ರಾಮದ ಬಸವನಪುರ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಂಗಳವಾರ ಸಂಜೆ ಗ್ರಾಮಾಂತರ ಪಿಎಸ್ಐ ಶ್ರವಣ ದಾಸರಡ್ಡಿ ನೇತೃತ್ವದಲ್ಲಿ ದಾಳಿ ಮಾಡಿದ ಪೊಲೀಸರು ಪಣಕ್ಕಿಟ್ಟಿದ್ದ ₹3500 ಅನ್ನು ವಶ ಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.