ADVERTISEMENT

ಮೋದಿ ಹೊಗಳಿದ್ದಕ್ಕೆ ಇಮ್ರಾನ್‌ ಖಾನ್‌ ಮೇಲೆ ದಾಳಿ: ನಳಿನ್‌ ಕುಮಾರ್‌ ಕಟೀಲ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ನವೆಂಬರ್ 2022, 12:51 IST
Last Updated 4 ನವೆಂಬರ್ 2022, 12:51 IST
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌   

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದಕ್ಕೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಮೇಲೆ ಗುಂಡಿನ ದಾಳಿ ನಡಿದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಬಿಜೆಪಿ ಕಾರ್ಯಕರ್ತರ ಜನಸಂಕಲ್ಪ ಸಭೆಯಲ್ಲಿ ಮಾತನಾಡಿದ ನಳೀನ್‌ ಕುಮಾರ್‌ ಕಟೀಲ್‌, ಪಾಕಿಸ್ತಾನದ ಲೋಕಸಭೆಯಲ್ಲಿ ಇಮ್ರಾನ್‌ ಖಾನ್‌ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದರು. ಹಾಗಾಗಿ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಇದು ಪ್ರತೀಕಾರದ ದಾಳಿಯಾಗಿದೆ ಎಂದರು.

ಗುರುವಾರ ಸಂಜೆ ರಾಜಕೀಯ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಇಮ್ರಾನ್ ಖಾನ್ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಪಂಜಾಬ್‌ ಪ್ರಾಂತ್ಯದ ವಜೀರಾಬಾದ್‌ ನಗರದ ಅಲ್ಲಾಹ್‌ವಾಲ ಚೌಕವನ್ನು ರ‍್ಯಾಲಿ ಸಮೀಪಿಸಿದಾಗ ಕಂಟೈನರ್‌ ಟ್ರಕ್‌ನಿಂದ ಇಳಿಯುತ್ತಿದ್ದ ಇಮ್ರಾನ್‌ ಅವರ ಹತ್ಯೆಗೆ ಶೂಟರ್‌ ಗುಂಡು ಹಾರಿಸಿದ್ದ. ಇಮ್ರಾನ್‌ ಅವರ ಬಲಗಾಲಿಗೆ ಗುಂಡು ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.