ADVERTISEMENT

ಆಟೊ ಪಲ್ಟಿ: ಗಾರೆ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 2:22 IST
Last Updated 21 ಸೆಪ್ಟೆಂಬರ್ 2020, 2:22 IST

ಹಲಗೂರು: ಚಾಲಕನ ನಿಯಂತ್ರಣ ತಪ್ಪಿ ಆಟೊ ಉರುಳಿ ಬಿದ್ದು ಯುವಕ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಮೀಪದ ಬುಯ್ಯನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕನಕಪುರ ತಾಲ್ಲೂಕಿನ ತೋಕಸಂದ್ರ ಗ್ರಾಮದ ಶೇಖರ್ (20) ಮೃತ ಯುವಕ. ಈತ ತನ್ನ ನಾಲ್ವರು ಸ್ನೇಹಿತರೊಡನೆ ಬುಯ್ಯನದೊಡ್ಡಿ ಗ್ರಾಮಕ್ಕೆ ಕಟ್ಟಡ ಕೆಲಸಕ್ಕೆ ಬಂದಿದ್ದರು. ಕೆಲಸ ಮುಗಿಸಿ ತಮ್ಮ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತವಾಗಿ ಶೇಖರ್ ತೀವ್ರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.