ADVERTISEMENT

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವುದಿಲ್ಲ: ಸಹೈಕೋರ್ಟ್‌ಗೆ ಮಾಹಿತಿ

ಸರ್ಕಾರಿ ವಕೀಲರಿಂದ ಹೈಕೋರ್ಟ್‌ಗೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 14:14 IST
Last Updated 31 ಜುಲೈ 2024, 14:14 IST
<div class="paragraphs"><p>ಬೇಬಿ ಬೆಟ್ಟ ಅರಣ್ಯ ಪ್ರದೇಶ</p></div>

ಬೇಬಿ ಬೆಟ್ಟ ಅರಣ್ಯ ಪ್ರದೇಶ

   

ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದ ಗಣಿಗಾರಿಕೆ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡುವುದಿಲ್ಲ ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದರು.

ಬುಧವಾರ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳ ವಿಭಾಗೀಯ ಪೀಠದಲ್ಲಿ ಕೆಆರ್‌ಎಸ್ ಜಲಾಶಯದ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ನಡೆದ ವಿಚಾರಣೆಯ ವೇಳೆ ಸರ್ಕಾರಿ ವಕೀಲರು ಈ ಸ್ಪಷ್ಟನೆ ನೀಡಿದರು.

ADVERTISEMENT

‘ಅಣೆಕಟ್ಟೆ ಸುರಕ್ಷಾ ಸಮಿತಿ ಸಭೆಯಲ್ಲಿ ಕೆಆರ್‌ಎಸ್ ಅಣೆಕಟ್ಟೆಯ 20 ಕಿ.ಮೀ.ವ್ಯಾಪ್ತಿಯಲ್ಲಿ ಗಣಿಗಾರಿಕೆಯ ಟ್ರಯಲ್ ಬ್ಲಾಸ್ಟ್‌ ನಡೆಸಬೇಕೇ? ಬೇಡವೇ? ಎಂಬ ಬಗ್ಗೆ ತೀರ್ಮಾನ ತೆಗೆದುಕೊಂಡು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು’ ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆ 4 ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.