ADVERTISEMENT

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇ ಬಂದ್‌ ಇಲ್ಲ ಇಂದು ; ಸಂಸದ ಪ್ರತಾಪ ಸಿಂಹ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2023, 3:31 IST
Last Updated 21 ಆಗಸ್ಟ್ 2023, 3:31 IST
ಸಂಸದ ಪ್ರತಾಪ ಸಿಂಹ
ಸಂಸದ ಪ್ರತಾಪ ಸಿಂಹ   

ಮಂಡ್ಯ: ‘ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ಬಿಜೆಪಿ ನಡೆಸುತ್ತಿರುವ ಹೋರಾಟದಲ್ಲಿ ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ವೇ ತಡೆ ಇರುವುದಿಲ್ಲ, ಪ್ರತಿಭಟನೆ ಮಾತ್ರ ನಡೆಸಲಾಗುವುದು’ ಎಂದು ಸಂಸದ ಪ್ರತಾಪ ಸಿಂಹ ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ್ದಾರೆ.

ತಾಲ್ಲೂಕಿನ ಇಂಡುವಾಳು ಬಳಿ ಎಕ್ಸ್‌ಪ್ರೆಸ್‌ವೇ ತಡೆದು ಬೃಹತ್‌ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರು ತಿಳಿಸಿದ್ದರು. ಇದಕ್ಕೆ ಸ್ಪಷ್ಟನೆ ನೀಡಿರುವ ಪ್ರತಾಪ, ‘ಎಕ್ಸ್‌ಪ್ರೆಸ್‌ ವೇ ತಡೆ ಕೈಬಿಟ್ಟು ಮಂಡ್ಯದಲ್ಲಿ ಪ್ರತಿಭಟಿಸಲಾಗುವುದು’ ಎಂದಿದ್ದಾರೆ.

‘ಸಾಂಕೇತಿಕವಾಗಿ ಮಂಡ್ಯದ ಜೆ.ಸಿ ವೃತ್ತದಲ್ಲಿ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆಯಲಾಗುವುದು. ಎಕ್ಸ್‌ಪ್ರೆಸ್‌ವೇ ತಡೆ ನಿರ್ಧಾರ ಕೈಬಿಡಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಪಿ.ಉಮೇಶ್‌ ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.