ADVERTISEMENT

ಮಂಡ್ಯ | ಅಭಿಯಾನ ರಥ: ಸಮಾರಂಭ ಯಶಸ್ವಿಗೊಳಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 5:59 IST
Last Updated 23 ಸೆಪ್ಟೆಂಬರ್ 2025, 5:59 IST
ಮಂಡ್ಯ ನಗರದ ವೀರಶೈವ ವಿದ್ಯಾರ್ಥಿನಿಲಯದಲ್ಲಿ ಕರೆಯಲಾಗಿದ್ದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಬೇಬಿಬೆಟ್ಟದ ಶ್ರೀರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ ಅವರು ಮಾತನಾಡಿದರು
ಮಂಡ್ಯ ನಗರದ ವೀರಶೈವ ವಿದ್ಯಾರ್ಥಿನಿಲಯದಲ್ಲಿ ಕರೆಯಲಾಗಿದ್ದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಬೇಬಿಬೆಟ್ಟದ ಶ್ರೀರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ ಅವರು ಮಾತನಾಡಿದರು   

ಮಂಡ್ಯ: ಸರ್ಕಾರವು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಸಂಚರಿಸುತ್ತಿರುವ ಬಸವ ಸಂಸ್ಕೃತಿ ಅಭಿಯಾನದ ರಥ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿದ್ವು ಭವ್ಯವಾಗಿ ಸ್ವಾಗತಿಸಿ ಸಮಾರಂಭ ಯಶಸ್ವಿಗೊಳಿಸೋಣ ಎಂದು ಬೇಬಿಬೆಟ್ಟದ ಶ್ರೀರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ ಮನವಿ ಮಾಡಿದರು.

ನಗರದ ವೀರಶೈವ ವಿದ್ಯಾರ್ಥಿನಿಲಯದಲ್ಲಿ ಭಾನುವಾರ ಕರೆಯಲಾಗಿದ್ದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಬಸವ ಸಂಸ್ಕೃತಿ ಅಭಿಯಾನದ ರಥವು ಸೆ.25 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರಕ್ಕೆ ಆಗಮಿಸುತ್ತಿದೆ. ಇದರ ಭಾಗವಾಗಿ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಲಾಮಂದಿರದಲ್ಲಿ ಸಮಾರಂಭ ನಡೆಯಲಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ, ‘ಜಂಗಮದೆಡೆಗೆ’ ನಾಟಕ ನಡೆಯಲಿದೆ. ಜೊತೆಗೆ ಆಗಮಿಸುವ ಸಾರ್ವಜನಿಕರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಹಲವು ಮಠಾಧೀಶರು ಭಾಗವಹಿಸುವರು ಎಂದರು.

ADVERTISEMENT

12ನೇ ಶತಮಾನದಲ್ಲಿ ಸಮಸಮಾಜ ನಿರ್ಮಾಣ ಮಾಡಲು ಸಾಮಾಜಿಕ ಕ್ರಾಂತಿ ನಡೆಸಿ ವಚನ ಸಾಹಿತ್ಯದ ಮೂಲಕ ಬುನಾದಿ ಹಾಕಿದ ಗುರು ಬಸವಣ್ಣ ಅವರು ವಿಶ್ವ ಸಾಂಸ್ಕೃತಿಕ ನಾಯಕರಾಗಿದ್ದಾರೆ. ಇವರ ಹೇಳಿದ ವಚನಾಮೃತ ಜೀವನಕ್ಕೆ ದಾರಿ ದೀಪವಾಗಿದೆ ಎಂದು ಶ್ಲಾಘಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿ ಉಪಾಧ್ಯಕ್ಷ ಮಹದೇವಪ್ಪ ಮಾತನಾಡಿ, ಬಸವಸಂಸ್ಕೃತಿ ಅಭಿಯಾನದ ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಮಾನವೀಯ ಮೌಲ್ಯಗಳನ್ನು ಹೆಚ್ಚಿಸಿದ ಬಸವಾದಿ ಶರಣರ ವಿಚಾರಗಳನ್ನು ಪ್ರಚಾರ ಮಾಡುವ ಸದುದ್ದೇಶದಿಂದ ಹಮ್ಮಿಕೊಂಡಿರುವ ಅಭಿಯಾನದಲ್ಲಿ ಜಾತ್ಯಾತೀತವಾಗಿ ಎಲ್ಲರೂ ಭಾಗವಹಿಸುವಂತೆ ಮನವಿ ಮಾಡಿದರು.

ಜಿಲ್ಲೆಯ ಬಸವಪರ ಸಂಘಟನೆಗಳ ಒಕ್ಕೂಟದ ಸಂಚಾಲಕರಾಗಿ ಅಖಿಲ ಭಾರತ ವೀರಶೈವ ಮಹಾಸಭೆಯ ಮಾಜಿ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಅವರನ್ನು ಆಯ್ಕೆ ಮಾಡಲಾಯಿತು. ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಶಿವಕುಮಾರ್, ಕಾರ್ಯಾಧ್ಯಕ್ಷ ಎಂ.ಎಸ್.ಮಂಜುನಾಥ್, ಮುಖಂಡರಾದ ಪ್ರಕಾಶ್, ಮಹದೇವಪ್ಪ, ಕಿರುಗಾವಲು ನಾಗರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.