ADVERTISEMENT

ಕೆ.ಆರ್.ಪೇಟೆ; ಬಸವ ಜಯಂತಿ ಆ.3ಕ್ಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2019, 18:16 IST
Last Updated 26 ಜೂನ್ 2019, 18:16 IST

ಕೆ.ಆರ್.ಪೇಟೆ: ಪಟ್ಟಣದಲ್ಲಿ ಆಗಸ್ಟ್ 3ರಂದು ತಾಲ್ಲೂಕು ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಬಸವ ಜಯಂತ್ಯುತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ-ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಸ್.ಧನಂಜಯ ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿ ವೀರಶೈವ–ಲಿಂಗಾಯತ ಸಮುದಾಯದವರನ್ನು ಸಂಘಟಿಸಿ, ಒಂದೇ ವೇದಿಕೆಯಲ್ಲಿ ತಂದು ವಿವಿಧ ಕಾರ್ಯಕ್ರಮ ಆಯೋಜಿಸಬೇಕು ಎಂಬುದು ಸಮಾಜದ ಹಿರಿಯರ ಆಶಯವಾಗಿತ್ತು. ಅದರಂತೆ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪಟ್ಟಣದ ಶ್ರೀರಂಗ ಚಿತ್ರಮಂದಿರದ ಆವರಣದಲ್ಲಿ ಸಮಾರಂಭ ನಡೆಯಲಿದ್ದು, ಇದೇ ಸಂದರ್ಭ ತಾಲ್ಲೂಕು ಮಟ್ಸದ ಬಸವಶ್ರೀ ಪ್ರಶಸ್ತಿ ಪ್ರದಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ ದೇಶಿಕೇಂದ್ರ ಶ್ರೀಗಳು, ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು, ತೆಂಡೇಕೆರೆ ಮಠದ ಗಂಗಾಧರ ಶಿವಾಚಾರ್ಯ ಶ್ರೀಗಳು, ಬೇಬಿಮಠದ ತ್ರೀನೇತ್ರ ಮಹಾಂತ ಸ್ವಾಮೀಜಿ, ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ, ರಾಜ್ಯ ಘಟಕದ ಅಧ್ಯಕ್ಷ ತಿಪ್ಪಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಸಂಸದೆ ಸುಮಲತಾ ಅಂಬರೀಶ್, ಚಿತ್ರನಟ ದೊಡ್ಡಣ್ಣ, ಶಾಸಕ ಕೆ.ಸಿ.ನಾರಾಯಣಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ತಾಲ್ಲೂಕು ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ತೋಟಪ್ಪಶೆಟ್ಟಿ, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ರಹ್ಮಣ್ಯ, ತಾಲ್ಲೂಕು ಯುವ ಘಟಕದ ಕಾರ್ಯದರ್ಶಿ ತೀರ್ಥೇಶ್, ತಾಲ್ಲೂಕು ವೀರಶೈವ ಹಿತರಕ್ಷಣಾ ಯುವ ಘಟಕದ ಅಧ್ಯಕ್ಷ ಗಂಜಿಗೆರೆ ವಿಜಯಕುಮಾರ್, ತಾಲ್ಲೂಕು ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಶಿವಶಂಕರ್, ಕೋಶಾಧ್ಯಕ್ಷ (ಖಜಾಂಚಿ) ಶಿವಮೂರ್ತಿ, ಮಹಾಸಭಾದ ಪದಾಧಿಕಾರಿಗಳಾದ ಚೀಕನಹಳ್ಳಿ ಪ್ರಕಾಶ್, ನಂಜುಂಡಪ್ಪ, ಡಿ.ಸಿ.ಕುಮಾರ್, ರಾಣಿ, ಶಿವಕುಮಾರ್, ಜ್ಯೋತಿ, ಪುಷ್ಪಾ, ಮೀನಾಕ್ಷಿ ಲಿಂಗರಾಜು, ರಾಜಮ್ಮ, ಹರೀಶ್, ಯಡಿಯೂರಪ್ಪ, ವೀರಪ್ಪ, ಕನಕರಾಜು, ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.