ADVERTISEMENT

ಪಾಂಡವಪುರ | ‘ಬಸವಣ್ಣ ಸಮಾನತೆಯ ಹರಿಕಾರ’

ಜಯಂತಿಯಲ್ಲಿ ಸುತ್ತೂರು ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 25 ಮೇ 2025, 13:47 IST
Last Updated 25 ಮೇ 2025, 13:47 IST
ಪಾಂಡವಪುರದಲ್ಲಿ ಶುಕ್ರವಾರ ನಡೆದ ಬಸವಣ್ಣನವರ ಜಯಂತ್ಯುತ್ಸವವನ್ನು ಉದ್ಘಾಟಿಸಲಾಯಿತು. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ತ್ರಿನೇತ್ರಸ್ವಾಮೀಜಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪಾಲ್ಗೊಂಡಿದ್ದರು
ಪಾಂಡವಪುರದಲ್ಲಿ ಶುಕ್ರವಾರ ನಡೆದ ಬಸವಣ್ಣನವರ ಜಯಂತ್ಯುತ್ಸವವನ್ನು ಉದ್ಘಾಟಿಸಲಾಯಿತು. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ತ್ರಿನೇತ್ರಸ್ವಾಮೀಜಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪಾಲ್ಗೊಂಡಿದ್ದರು   

ಪಾಂಡವಪುರ: ‘ಬಸವಣ್ಣನವರ ಅನುಭವ ಮಂಟಪದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿಚಾರಗಳನ್ನು ಚರ್ಚಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಬಸವಣ್ಣ ಅವರ 892ನೇ ಜಯಂತ್ಯುತ್ಸವದ ಸಾನಿಧ್ಯವಹಿಸಿ ಅವರು ಮಾತನಾಡಿದರು.

‘ಅಸ್ಪ್ಯಶ್ಯತೆ ಹೋಗಲಾಡಿಸಿ ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರು ಶ್ರಮಿಸಿದರು. ಬಸವಣ್ಣನವರ ಆದರ್ಶ, ಹೋರಾಟ ಮತ್ತು ಸಾಮಾಜಿಕ ಕಳಕಳಿಯನ್ನು ನಾವು ಈ ಕಾಲಘಟ್ಟದಲ್ಲಿಯೂ ಸ್ಮರಿಸುತ್ತಿದ್ದೇವೆ ಎಂದರೆ ಅವರ ದಿವ್ಯ ಶಕ್ತಿ ಎಷ್ಟಿರಬಹುದು ಎಂಬುದನ್ನು ನಾವು ಅರಿಯಬೇಕಿದೆ ಎಂದು ಹೇಳಿದರು.

ADVERTISEMENT

ಬಸವಣ್ಣನವರು ಕನ್ನಡ ಭಾಷೆಯ ಮೂಲಕವೇ ಜನರಿಗೆ ಅರಿವು ಮೂಡಿಸಿ ಜನರಲ್ಲಿ ಸಾಮಾಜಿಕ ಅರಿವು ಮೂಡಿಸಿದರು’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.