ಮಂಡ್ಯ: ‘ಬಸವಣ್ಣ ಅಸ್ಪೃಶ್ಯತೆ ವಿರುದ್ಧ ಹೋರಾಟ ಮಾಡಿ, ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಿದರು’ ಎಂದು ಅಂತರರಾಷ್ಟ್ರೀಯ ಅಲಯನ್ಸ್ ಸಂಸ್ಥೆಯ ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ. ಹನುಮಂತು ಹೇಳಿದರು.
ನಗರದಲ್ಲಿರುವ ವೀರಶೈವ ವಿದ್ಯಾರ್ಥಿನಿಲಯದ ಸಭಾಂಗಣದಲ್ಲಿ ಕೃಷಿಕ ಅಲಯನ್ಸ್ ಸಂಸ್ಥೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಮಂಗಳವಾರ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಅಂಗವಾಗಿ ಬಸವಶ್ರೀ ಹಾಗೂ ಕಾಯಕ ಪ್ರಶಸ್ತಿ ಪ್ರದಾನ– ವಚನ ಗಾಯನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಸರ್ವ ಜನಾಂಗವನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಸ್ಥಾಪಿಸಿ, ಶರಣ ಸಂಸ್ಕೃತಿಗೆ ನಾದಿಯಾಡಿದರು. ಕಟ್ಟು ಪಾಡುಗಳಿದ್ದ ಸಮಾಜದಲ್ಲಿ ಹೊಸ ಬದಲಾವಣೆಗಾಗಿ ಶ್ರಮಿಸಿದರು’ ಎಂದರು.
ಗಾಯಕಿ ವರ್ಷ ಹೂಗಾರ್ ಮತ್ತು ಡೇವಿಡ್ ಪ್ರತಿಭಾಂಜಲಿ ಅವರು ವಚನ ಗಾಯನ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್.ಶಿವಪ್ರಕಾಶ್, ಅಲಯನ್ಸ್ ಸಂಸ್ಥೆ 2ನೇ ಜಿಲ್ಲಾ ಗವರ್ನರ್ ಕೆ.ಎಸ್. ಚಂದ್ರಶೇಖರ್, ಕೃಷಿಕ ಅಲಯನ್ಸ್ ಸಂಸ್ಥೆ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ಮೋಹನ್‌ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.