ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕೆ.ಆರ್.ಪೇಟೆ: ಆರ್.ಸಿ.ಬಿ ವಿಜಯೋತ್ಸವದ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿದಿಂದ ಮೃತಪಟ್ಟ 11 ಜನರ ಸಾವಿಗೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗರಾಜು ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಶೀಳನೆರೆ ಭರತ್, ರವಿ, ಮಂಜು, ಯೋಗೇಶ್ ಸೇರಿದಂತೆ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.