ಬೆಳಕವಾಡಿ: ಮಲ್ಲಿಕ್ಯಾತನಹಳ್ಳಿ ಗ್ರಾಮದ ಮಠದ ಗುಡ್ಡದಲ್ಲಿ ಶನಿವಾರ ರಾತ್ರಿ ಚಿರತೆಯೊಂದು ಎಂ.ರಾಘವೇಂದ್ರ ಎಂಬುವರಿಗೆ ಸೇರಿದ ಹಸುವನ್ನು ಕೊಂದು ತಿಂದಿದೆ.
ಚಿರತೆ ದಾಳಿಯಿಂದ ಸುಮಾರು ₹ 25 ಸಾವಿರ ಮೌಲ್ಯದ ಹಸು ಮೃತಪಟ್ಟಿದೆ. ಇಲಾಖೆ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ರಾಘವೇಂದ್ರ ಒತ್ತಾಯಿಸಿದ್ದಾರೆ.
ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಚಿರತೆ ಸೆರೆಗೆ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.