ADVERTISEMENT

ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ: ಶಿಕ್ಷಣಾಧಿಕಾರಿ ವಿ.ಈ.ಉಮಾ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:08 IST
Last Updated 24 ಫೆಬ್ರುವರಿ 2026, 7:08 IST
ಹಲಗೂರು ಸಮೀಪದ ಬಾಣಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಹಲಗೂರು ಸಮೀಪದ ಬಾಣಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಹಲಗೂರು: ‘ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕುತ್ತಿದ್ದು, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ’ ಎಂದು ಮಳವಳ್ಳಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ ತಿಳಿಸಿದರು.

ಸಮೀಪದ ಬಾಣಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಶರಸಾಗರ-4’ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಶಾಸಕ ನರೇಂದ್ರಸ್ವಾಮಿ ಅವರ ಕಾಳಜಿಯಿಂದಾಗಿ ಎಲ್ಲಾ ಸರ್ಕಾರಿ ಶಾಲೆಗಳಿಗೂ ಮೂಲಸೌಕರ್ಯಗಳನ್ನು ಒದಗಿಸಿ, ಸ್ಮಾರ್ಟ್ ತರಗತಿಗಳನ್ನು ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ADVERTISEMENT

ಕಿರುತೆರೆ ನಟ ಕೀರ್ತಿ ಭಾನು, ಸಂಚಯ ಗಣೇಶ್, ಕಾಮಿಡಿ ಕಿಲಾಡಿ ಖ್ಯಾತಿಯ ಅಭಿಜಿತ್ ಗೌಡ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಎಂ.ಕೆ.ಶ್ರೀನಿವಾಸ್, ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿದರು.

ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಡಿ.ಹಲಸಹಳ್ಳಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್, ಮುಖ್ಯ ಶಿಕ್ಷಕ ಜಿ.ಎಸ್.ರವಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸವರಾಜು, ರಾಮಕೃಷ್ಣ, ಕೃಷ್ಣ, ಮಲ್ಲೇಶ್, ರಾಮಚಂದ್ರ, ಶಿವಣ್ಣ, ಶಿವಮಲ್ಲಮ್ಮ, ಆನಂದ, ಲಕ್ಷ್ಮಪ್ಪ, ಶಿವಕುಮಾರ್, ಮನು, ಶಿಕ್ಷಕರಾದ ಆನಂದ, ರುಕ್ಮಿಣಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.