ADVERTISEMENT

ಮಂಡ್ಯ ಜಿಲ್ಲಾಧಿಕಾರಿ ಕುಮಾರಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2025, 13:15 IST
Last Updated 22 ಜನವರಿ 2025, 13:15 IST
<div class="paragraphs"><p>ಕುಮಾರ</p></div>

ಕುಮಾರ

   

ಮಂಡ್ಯ: ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಕುಮಾರ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಎಂದು ಪ್ರಶಸ್ತಿ ಪ್ರಕಟಿಸಿದೆ.

2024- 25ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನಾವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ಘೋಷಣೆಯಾಗಿದೆ.

ADVERTISEMENT

ಈ ಪ್ರಶಸ್ತಿಯನ್ನು ಜ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.