ADVERTISEMENT

ಹಲಗೂರು: ‘ಕೆಆರ್‌ಎಸ್‌ನಿಂದ ರೈತರಿಗೆ ಉತ್ತಮ ಬದುಕು’

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 13:05 IST
Last Updated 4 ಜೂನ್ 2025, 13:05 IST
ಹಲಗೂರು ಲಯನ್ಸ್ ಕ್ಲಬ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಆಚರಿಸಲಾಯಿತು
ಹಲಗೂರು ಲಯನ್ಸ್ ಕ್ಲಬ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಆಚರಿಸಲಾಯಿತು   

ಹಲಗೂರು: ರೈತರ ಧ್ವನಿಯಾಗಿದ್ದ ಮಹಾರಾಜರು ಕನ್ನಂಬಾಡಿ ಅಣೆಕಟ್ಟು ನಿರ್ಮಿಸಿದ್ದು, ನೀರಾವರಿಯಿಂದಾಗಿ ಮಂಡ್ಯ ಜಿಲ್ಲೆಯ ರೈತರು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಕೆ. ಕುಮಾರ್ ತಿಳಿಸಿದರು.

ಲಯನ್ಸ್ ಕ್ಲಬ್ ಅಫ್ ಹಲಗೂರು ವತಿಯಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನದ ಪ್ರಯುಕ್ತ ಹಲಗೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೊರ ರೋಗಿಗಳಿಗೆ ಉಪಹಾರ ವಿತರಿಸಿ ಅವರು ಮಾತನಾಡಿದರು.

ಕನ್ನಂಬಾಡಿ ಕಟ್ಟೆಯನ್ನು ಕಟ್ಟಿದ ಪ್ರತಿಫಲದಿಂದಾಗಿ ಮಂಡ್ಯ ನೀರಾವರಿ ಪ್ರದೇಶ ಆಗಿದ್ದಲ್ಲದೇ, ನಾಡಿನ ಜನರಿಗೆ ನೀರು ಸಿಗುತ್ತಿದೆ. ನಾಲ್ವಡಿಯವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಹಿನ್ನೆಲೆಯಲ್ಲಿ ಮಳವಳ್ಳಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ವಿದ್ಯಾವಂತರನ್ನು ಕಾಣಬಹುದಾಗಿದೆ ಎಂದರು.

ADVERTISEMENT

ಲಯನ್ಸ್ ಕ್ಲಬ್ ಕಾರ್ಯದರ್ಶಿ ಡಿ.ಎಲ್.ಮಾದೇಗೌಡ, ಖಜಾಂಚಿ ಕೆ.ಶಿವರಾಜು, ಸದಸ್ಯರಾದ ಎಚ್.ವಿ. ರಾಜಣ್ಣ, ಎ.ಎಸ್. ದೇವರಾಜು, ಮನೋಹರ್, ಜಯಶಂಕರ್, ಶ್ರೀನಿವಾಸಾಚಾರಿ, ಪ್ರವೀಣ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.