ಮಂಡ್ಯ: ನಂದಿಕೇಶ್ವರ ಭರತನಾಟ್ಯ ಕಲಾಶಾಲೆಯ ವಿದ್ಯಾರ್ಥಿನಿ ಹರ್ಷಿತಾ ನಾಗೇಶ್ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ನಗರದಲ್ಲಿ ಅ.19ರಂದು ನಡೆಯಲಿದೆ ಎಂದು ಕಾರ್ಯಕ್ರಮದ ಮಾರ್ಗದರ್ಶಕಿ ಉಮಾ ದೊರೆಸ್ವಾಮಿ ತಿಳಿಸಿದರು.
ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಅಂದು ಸಂಜೆ 4.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ನಾಟ್ಯ ವಿದುಷಿ ಕೆ.ಎಸ್. ಶೈಲಾ ಅವರ ಶಿಷ್ಯೆಯಾದ ಹರ್ಷಿತಾ ನಾಗೇಶ್ ಅವರು ಭರತನಾಟ್ಯ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಸ್ತುತ ವಿದ್ವತ್ ಪರೀಕ್ಷೆಗೆ ಅಭ್ಯಾಸ ನಡೆಸುತ್ತಿದ್ದಾರೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಅಧ್ಯಕ್ಷತೆ ವಹಿಸುವರು. ನಟರಾಜ ಕಲಾನಿಕೇತನ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ನಾಟ್ಯಾಚಾರ್ಯ ಪ್ರಕಾಶ್ ಎಸ್.ಐಯ್ಯರ್, ಬೆಂಗಳೂರಿನ ನೃತ್ಯ ಗಂಗೋತ್ರಿಯ ನಿರ್ದೇಶಕ ಡಾ.ಎ.ಎನ್.ಸುಧೀರ್‌ಕುಮಾರ್ ಅವರಿಗೆ ಗೌರವ ಸಮರ್ಪಣೆ ಮಾಡಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್ ಭಾಗವಹಿಸುವರು ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.