ಮಂಡ್ಯ: ಜಿಲ್ಲೆಯಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಗುರುವಾರ ನಡೆದವು, ಜೊತೆಗೆ ದಂಪತಿ ಸಮೇತ ವಿಶೇಷ ಪೂಜೆ ಸಲ್ಲಿಸಿದರು.
ನಗರದ ಕಾಳಿಕಾಂಬ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ, ಶಂಕರಪುರದಲ್ಲಿರುವ ಗಂಗಾಧರೇಶ್ವರಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಹೂವಿನಿಂದ ಅಲಂಕಾರ ಮಾಡುವ ಮೂಲಕ ದೇವರ ಮೂರ್ತಿಗಳನ್ನು ಬಗೆಬಗೆಯ ಹೂಗಳಿಂದ ಸಿಂಗರಿಸಲಾಗಿತ್ತು. ದೇವರ ದರ್ಶನಕ್ಕೆ ಬಂದ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.
ಭೀಮನ ಅಮಾವಾಸ್ಯೆ ಅಂಗವಾಗಿ ಪತ್ನಿಯು ತಮ್ಮ ಪತಿಗೆ ಪಾದಪೂಜೆ ಮಾಡಿ ಆಶೀರ್ವಾದ ಪಡೆದುಕೊಂಡರು. ಪತಿಗೆ ಆಯಸ್ಸು ಆರೋಗ್ಯ ಹೆಚ್ಚಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.