ಮಳವಳ್ಳಿ: ತಾಲ್ಲೂಕಿನ ಸಂಶೆಟ್ಟಿಪುರ ಗೇಟ್ ಬಳಿ ಮಳವಳ್ಳಿ–ಮೈಸೂರು ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಬೈಕ್ ಡಿಕ್ಕಿ ಹೊಡೆದು, ತಾಲ್ಲೂಕಿನ ಕೊದೇನಕೊಪ್ಪಲು ಗ್ರಾಮದ ಮುನಿಯಮ್ಮ (65) ಮೃತಪಟ್ಟರು.
ಮುನಿಯಮ್ಮ ಕೂಲಿ ಕೆಲಸಕ್ಕಾಗಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಪಿಎಸ್ಐ ಡಿ.ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.