
ಪ್ರಜಾವಾಣಿ ವಾರ್ತೆಶ್ರೀರಂಗಪಟ್ಟಣ: ಬೈಕ್‌ಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪಟ್ಟಣದ ಪಶ್ಚಿಮವಾಹಿನಿ ಬಳಿ, ಕಾವೇರಿ ನದಿ ಸೇತುವೆ ಮೇಲೆ ಗುರುವಾರ ನಡೆದಿದೆ.
ತಾಲ್ಲೂಕಿನ ಪಾಲಹಳ್ಳಿಯ ಗಾರೆ ರಾಮಣ್ಣ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಅದೇ ಗ್ರಾಮದ ಸುಬ್ಬಣ್ಣ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪಿಎಸ್‌ಐ ಶಿವಲಿಂಗ ದಳವಾಯಿ ಭೇಟಿ ನೀಡಿದ್ದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.