ಹಲಗೂರು: ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ-948ರ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ನಡೆದಿದೆ.
ಹಲಗೂರು ಸಮೀಪದ ಬಾಳೆಹೊನ್ನಿಗದ ದಿ.ಕುಳ್ಳ ನಂಜಯ್ಯ ಅವರ ಪುತ್ರ ಬಿ.ಕೆ.ಮಂಜು (35) ಮೃತ ವ್ಯಕ್ತಿ.
ಹಲಗೂರು ಸರ್ವೀಸ್ ರಸ್ತೆಯಿಂದ ಹೆದ್ದಾರಿ ದಾಟುವಾಗ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ಸಂದರ್ಭ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೋಮವಾರ ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ನಂತರ ಮೃತದೇಹ ವಾರಸುದಾರರಿಗೆ ಹಿಂತಿರುಗಿಸಲಾಗಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.