ಬಿ.ವೈ ವಿಜಯೇಂದ್ರ ( ಸಂಗ್ರಹ ಚಿತ್ರ)
ಮಂಡ್ಯ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ ಅವರು ಬರುತ್ತಿದ್ದ ಎತ್ತಿನಗಾಡಿ ಅಡ್ಡ ಹಾಕಿದ ಜೆಡಿಎಸ್ ಕಾರ್ಯಕರ್ತರು, ಪ್ರೀತಂಗೌಡ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆಯಿತು. ‘ಗೌಡರ ಗೌಡ ಪ್ರೀತಂ ಗೌಡ’ ಎಂದು ಘೋಷಣೆ ಕೂಗಿದ್ದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಪ್ರೀತಂಗೌಡ ಅವರಿಗೆ ಬುದ್ಧಿಮಾತು ಹೇಳುವಂತೆ ತಾಕೀತು ಮಾಡಿದರು. ಕೆಲಕಾಲ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.