ಮಂಡ್ಯ: ‘ಬಿಜೆಪಿಗೆ ಉತ್ತಮ ನಾಯಕತ್ವದ ಕೊರತೆ ಇದೆ. ಹೀಗಾಗಿ ಅವರು ಕನಸು ಕಾಣುತ್ತಿದ್ದಾರೆ. ಇಲ್ಲಿಂದ ಹೋಗಿ ಅವರ ಲೀಡರ್‌ಶಿಫ್ ತೆಗೆದುಕೊಳ್ಳುವ ಅಗತ್ಯ ಕಂಡುಬಂದಿಲ್ಲ. ಕಾಂಗ್ರೆಸ್ ಭದ್ರವಾಗಿದೆ. ಬಿಜೆಪಿ–ಜೆಡಿಎಸ್ ಶಾಸಕರ ಸಂಖ್ಯೆ ಕಡಿಮೆಯಿದೆ. ಅವರೇ ನಮ್ಮ ಪಕ್ಷಕ್ಕೆ ಬಂದರೆ ಸಂತೋಷಪಡುತ್ತೇವೆ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಮುನಿರತ್ನ ಹೇಳಿಕೆ ವಿಚಾರಕ್ಕೆ ಶನಿವಾರ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ‘ಮುನಿರತ್ನ ಕೇಸ್ ಎದುರಿಸುತ್ತಿದ್ದಾರೆ. ಜೈಲಿಂದ ಹೊರಗೆ ಬಂದಿದ್ದಾರೆ. ಅವರು ಡಿಕೆಶಿ, ಸುರೇಶ್ ಮೇಲೆ ವಾಗ್ದಾಳಿ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪಕ್ಷದಲ್ಲೇ ಇರುತ್ತಾರೆ. ಪಕ್ಷ ಬಿಟ್ಟು ಹೋಗುವ ಅವಶ್ಯಕತೆ ಏನಿದೆ? ಎಂದರು.
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ‘ಡಿ.ಕೆ.ಶಿವಕುಮಾರ್ ನಮ್ಮ ಅಧ್ಯಕ್ಷರು. ನಾನು ಚಿಕ್ಕವನು ಮಾತನಾಡಲ್ಲ. ನಾನು ಮಾತನಾಡೋದಕ್ಕೆ ಅಧಿಕಾರ ಇಲ್ಲ. ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದು ಹೈಕಮಾಂಡ್ ತಿಳಿಸಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.