ಬೆಂಗಳೂರು: ಬಿಜೆಪಿ ನಾಯಕರ ನಿಯೋಗವು ಬುಧವಾರ ಮದ್ದೂರಿಗೆ ಭೇಟಿ ನೀಡಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಈ ನಿಯೋಗದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಇರಲಿದ್ದಾರೆ ಎಂದರು.
ಮದ್ದೂರಿನ ಗಲಭೆಕೋರರನ್ನು ಕೂಡಲೇ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದರು. ‘ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಹೇಳಿಕೆ ಗಮನಿಸಿದರೆ ಮೈ ಉರಿಯುತ್ತದೆ. ಹೆಣ್ಣು ಮಕ್ಕಳ ಮೇಲಿನ ಲಾಠಿಚಾರ್ಜ್ ಅನ್ನು ಸಣ್ಣಪುಟ್ಟ ಘಟನೆ ಎಂದು ಗೃಹ ಸಚಿವರು ಹೇಳಿಕೆ ನೀಡಿದ್ದಾರೆ.ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳಿಗೆ ಅಪಮಾನ ಹಾಗೂ ಅವರ ಭಾವನೆಗಳಿಗೆ ಧಕ್ಕೆ ಆಗುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.