ADVERTISEMENT

ಮಂಡ್ಯ: ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಕ್ರಮಕ್ಕೆ ಬಿಜೆಪಿ ಮನವಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 4:45 IST
Last Updated 21 ಆಗಸ್ಟ್ 2025, 4:45 IST
‘ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಮತ್ತು ಸತ್ಯಕ್ಕೆ ದೂರವಾದ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ಮುಖಂಡರು ಬುಧವಾರ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎ.ಇ. ಗಂಗಾಧರಸ್ವಾಮಿ ಅವರಿಗೆ ಮನವಿ ಪತ್ರ ನೀಡಿದರು 
‘ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಮತ್ತು ಸತ್ಯಕ್ಕೆ ದೂರವಾದ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ಮುಖಂಡರು ಬುಧವಾರ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎ.ಇ. ಗಂಗಾಧರಸ್ವಾಮಿ ಅವರಿಗೆ ಮನವಿ ಪತ್ರ ನೀಡಿದರು    

ಮಂಡ್ಯ: ‘ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಮತ್ತು ಸತ್ಯಕ್ಕೆ ದೂರವಾದ ಹೇಳಿಕೆ ನೀಡಿ ಶ್ರದ್ಧಾ ಕೇಂದ್ರವಾಗಿರುವ ಶ್ರೀಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು. 

ಬುಧವಾರ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎ.ಇ. ಗಂಗಾಧರಸ್ವಾಮಿ ಅವರಿಗೆ ಮನವಿ ಪತ್ರ ನೀಡಿದರು. ಅಪಪ್ರಚಾರ ಮಾಡುತ್ತಿರುವ ಗಿರೀಶ ಮಟ್ಟಣ್ಣವರ್‌, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್, ಕಾಂಗ್ರೆಸ್ ಮುಖಂಡರಾದ ರಮ್ಯಾ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಿದ್ದೇನೆ. ತನಿಖೆ ನಡೆಸಿ ಎನ್ನುವ ಅನಾಮಿಕ ವ್ಯಕ್ತಿ ಯಾರು ಎಂಬ ಬಗ್ಗೆ ಯಾರಿಗೂ ಮಾಹಿತಿಯಿಲ್ಲ. ಆತನ ಹಿಂದಿರುವ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಧರ್ಮಸ್ಥಳ ಗ್ರಾಮದಲ್ಲಿ ಅನಾಥ ಮೃತದೇಹಗಳನ್ನು ಹೂಳಿದ ವಿಚಾರಕ್ಕೆ ಸಂಬಂಧಿಸಿದಂತೆ ಅನಾಮಿಕನ ದೂರಿನ ಮೇರೆಗೆ ನಡೆಯುತ್ತಿರುವ ಎಸ್‌ಐಟಿ ತನಿಖೆಗೆ ಬಿಜೆಪಿಯ ಸಂಪೂರ್ಣ ಬೆಂಬಲ ಇದೆ. ಆದರೆ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಎಡಪಂಥೀಯರ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ನಡೆಯುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ADVERTISEMENT

ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್‌, ಮುಖಂಡರಾದ ಹೊಸಹಳ್ಳಿ ಶಿವು, ಮಾದರಾಜ ಅರಸ್‌, ಆನಂದ್‌, ಗೊರವಾಲೆ ಶಿವಣ್ಣ, ಚಂದ್ರು, ನಾಗಣ್ಣ ಮಲ್ಲಪ್ಪ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.