ಮಂಡ್ಯ: ಮಂಗಳೂರಿನಲ್ಲಿ ನಡೆದ ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಎಸ್. ಇಂದ್ರೇಶ್ ನೇತೃತ್ವದಲ್ಲಿ ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಕೊಲೆ ಘಟನೆಯನ್ನು ಖಂಡಿಸಿ ಘೋಷಣೆ ಮೊಳಗಿಸಿದರು.
ಸುಹಾಸ್‌ಶೆಟ್ಟಿ ಅವರನ್ನು ಹಂತಕರು ಸಾರ್ವಜನಿಕ ಸ್ಥಳದಲ್ಲೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಇದೊಂದು ಅಮಾನವೀಯ ಕೃತ್ಯ ಎಂದು ಖಂಡಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಪರ ಸಂಘಟನೆಗಳ ಕಾರ‍್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿದ್ದರಾಮಯ್ಯ, ನಗರ ಘಟಕದ ಅಧ್ಯಕ್ಷ ವಸಂತಕುಮಾರ್, ಮಾಜಿ ಅಧ್ಯಕ್ಷ ವಿವೇಕ್, ಮಂಡ್ಯ ಗ್ರಾಮಾಂತರ ಅಧ್ಯಕ್ಷ ಭೀಮೇಶ್, ಚಾಮರಾಜು, ನಾಗಾನಂದ, ಶಿವಲಿಂಗು, ಶಿವಕುಮಾರ್ ಆರಾಧ್ಯ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.