ADVERTISEMENT

ಮಂಡ್ಯ | ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ; ದಸಂಸ ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 8 ಮೇ 2025, 9:31 IST
Last Updated 8 ಮೇ 2025, 9:31 IST
   

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಶೇ 75ರಷ್ಟು ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಸಿದ್ದರಾಮಯ್ಯನವರು ಭರವಸೆ ಈಡೇರಿಸಿಲ್ಲ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಗುರುವಾರ ಮಂಡ್ಯಕ್ಕೆ ಬಂದಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.