ಮದ್ದೂರು: ಜಾತಿಗಣತಿ ಪ್ರಸ್ತಾವವನ್ನು ವಿರೋಧಿಸಿ ಪಟ್ಟಣದ ಐಬಿ ವೃತ್ತದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಹಾಗೂ ಚುಂಚಶ್ರೀ ಬಳಗದದಿಂದ ಗುರುವಾರ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಲಾಯಿತು.
ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೃಷ್ಣ ಮಾತನಾಡಿ, ‘ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಅವೈಜ್ಞಾನಿಕವಾದ ಜಾತಿಗಣತಿಯನ್ನು ಹೊರತರಬಾರದು. ಇದು ಒಕ್ಕಲಿಗರ ಹಾಗೂ ಲಿಂಗಾಯತ ಸಮುದಾಯದ ವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮಠಾಧೀಶರು ಇದನ್ನು ಖಂಡಿಸಿ ರಾಜ್ಯ ಸರ್ಕಾರಕ್ಕೆ ಬಿಸಿಮುಟ್ಟಿಸಬೇಕು, ರಾಜ್ಯದಲ್ಲಿ 60 ಒಕ್ಕಲಿಗರು ಹಾಗೂ 70 ಲಕ್ಷ ಲಿಂಗಾಯತರು ಇದ್ದಾರೆ ಕಾಂತರಾಜು ವರದಿಯಲ್ಲಿ ಹೇಳಲಾಗಿದೆ. ಇದರಿಂದಾಗಿ ಸಮುದಾಯದ ಮೀಸಲಾತಿಗೆ ಪೆಟ್ಟು ಬೀಳಲಿದೆ’ ಎಂದರು.
ರಸ್ತೆ ತಡೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಂಘದ ತಾಲ್ಲೂಕು ಅಧ್ಯಕ್ಷ ದೇಶಹಳ್ಳಿ ಪಿ.ಶಿವಪ್ಪ, ರವಿ ಚನ್ನಸಂದ್ರ, ಮಹೇಶ್, ಶಿವಕುಮಾರ್, ರಾಮು, ಮ.ನ. ಪ್ರಸನ್ನ ಕುಮಾರ್, ಸುನಿಲ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.