ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಗ್ರಾಮದ ಆಂಜನೇಯ ಸ್ವಾಮಿ ಜಯಂತ್ಯುತ್ಸವ ನಡೆಯಿತು.
ಉತ್ಸವದ ಅಂಗವಾಗಿ ಆಂಜನೇಯ ಸ್ವಾಮಿಗೆ ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ವಿಶೇಷ ಪೂಜೆ ನೆರವೇರಿಸಿ ಪ್ರಸಾದ ವಿನಿಯೋಗ ಮಾಡಲಾಯಿತು.
ಮಿತ್ರ ಫೌಂಡೇಷನ್ ಅಧ್ಯಕ್ಷ ಬೂಕನಕೆರೆ ವಿಜಯರಾಮೇಗೌಡ ಮಾತನಾಡಿ, ‘ಧಾರ್ಮಿಕ ಉತ್ಸವಗಳನ್ನು ನಡೆಸುವ ಮೂಲಕ ಗ್ರಾಮೀಣ ಯುವಕರು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು. ದೇವರ ಉತ್ಸವಗಳು ಮತ್ತು ಹಬ್ಬಗಳು ಯುವ ಸಮುದಾಯದಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುತ್ತವೆ’ ಎಂದರು.
‘ಸತ್ಯಪಥದಲ್ಲಿ ಸಾಗಿ, ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂದು ಎಲ್ಲ ಧರ್ಮಗಳು ಹೇಳುತ್ತವೆ. ನಮ್ಮ ಸನಾತನ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.
ಆಂಜನೇಯ ಯುವಕರ ಬಳಗದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.